ಶೌಚಾಲಯ ನಿರ್ಮಾಣಕ್ಕೆ ವಿರೋಧ; ದಾವಣಗೆರೆ ಮಹಿಳೆ ಆತ್ಮಹತ್ಯೆ: ಸಿದ್ದರಾಮಯ್ಯಗೆ ಕುಮಾರಸ್ವಾಮಿ ಟ್ವೀಟ್ 
ರಾಜ್ಯ

ಶೌಚಾಲಯ ನಿರ್ಮಾಣಕ್ಕೆ ವಿರೋಧ; ದಾವಣಗೆರೆ ಮಹಿಳೆ ಆತ್ಮಹತ್ಯೆ: ಸಿದ್ದರಾಮಯ್ಯಗೆ ಕುಮಾರಸ್ವಾಮಿ ಟ್ವೀಟ್

ಶೌಚಾಲಯ ನಿರ್ಮಾಣ ವಿಚಾರಕ್ಕೆ ದಾವಣಗೆರೆಯಲ್ಲಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಮಾಜಿ ಮುಖ್ಯಮಂತ್ರಿ ....

ದಾವಣಗೆರೆ: ಶೌಚಾಲಯ ನಿರ್ಮಾಣ ವಿಚಾರಕ್ಕೆ ದಾವಣಗೆರೆಯಲ್ಲಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮಾಡಿದ್ದಾರೆ
ದಾವಣಗೆರೆಯ ಹರಪನಹಳ್ಳಿಯಲ್ಲಿ ಶೌಚಾಲಯ ನಿರ್ಮಾಣ ವಿಚಾರಕ್ಕೆ ಸಂಬಂಧ ನಡೆದ ಜಗಳದಲ್ಲಿ ಅನ್ನಪೂರ್ಣ ಎನ್ನುವ ಮಹಿಳೆ ಸೀಮೀಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದರ ಸಂಬಂಧ ಮುಖ್ಯಮಂತ್ರಿಗಳಿಗೆ ಟ್ವಿಟ್ಟರ್ ಸಂದೇಶ ಕಳಿಸಿರುವ ಕುಮಾರಸ್ವಾಮಿ ಸ್ವಚ್ಛ ಭಾರತ ಯೋಜನೆ ಅನುಷ್ಟಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಆಸಕ್ತಿ ವಹಿಸಿಯೂ ಕೆಲವೊಮ್ಮೆ ಲೋಪವು ಕಂಡುಬರುತ್ತಿದೆ.ಇದಕ್ಕೆ ಈ ಪ್ರಕರಣ ಒಂದು ಉದಾಹರಣೆ ಎಂದಿದ್ದಾರೆ.
ಕುಟುಂಬದ ಬಡತನ, ಅಸಹಾಯಕತೆಯನ್ನು ತಮ್ಮ ಲಾಭಕ್ಕೆ ಬಳಸುವ ವ್ಯಕ್ತಿಗಳು ನಾಗರಿಕ ಸಮಾಜದಲ್ಲಿರುವುದು ತಲೆ ತಗ್ಗಿಸುವ ವಿಚಾರ ಎಂದಿರುವ ಕುಮಾರಸ್ವಾಮಿ ಗ್ರಾಮ ಪಂಚಾಯತಿ ಪಿಡಿಒ, ಸದಸ್ಯರು ಸೇರಿ ಆಕೆಯ ಸಾವಿಗೆ ಕಾರಣವಾದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಎಂದು ಫೇಸ್ ಬುಕ್, ಟ್ವಿಟ್ಟರ್ ಮೂಲಕ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel