ಸಾಂದರ್ಭಿಕ ಚಿತ್ರ 
ರಾಜ್ಯ

ಮಹಿಳಾ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ: ಇಬ್ಬರ ಬಂಧನ

ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಕಿರುಕುಳ ನೀಡಿದ ಆರೋಪಿಗಳನ್ನು ಬಂಧಿಸಿದ ...

ಬೆಂಗಳೂರು: ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಕಿರುಕುಳ ನೀಡಿದ ಆರೋಪಿಗಳನ್ನು ಬಂಧಿಸಿದ ಘಟನೆ ನಿನ್ನೆ ನಗರದಲ್ಲಿ ನಡೆದಿದೆ. 
ವೈಯಾಲಿಕಾವಲ್ ಪೊಲೀಸ್ ಠಾಣೆಯ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿ ಪಿಂಕ್ ಹೊಯ್ಸಳ ಕಾರಿನಲ್ಲಿ ಸೋಮವಾರ ಮಧ್ಯರಾತ್ರಿ 1.30ರ ಸುಮಾರಿಗೆ ಗಸ್ತು ತಿರುಗುತ್ತಿದ್ದರು. ಆ ಹೊತ್ತಿನಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಗಳಾದ ರೋಹಿತ್ ಮತ್ತು ವೈಭವ್ 
ಪಿಂಕ್ ಹೊಯ್ಸಳ ವಾಹನದಲ್ಲಿ ಮಹಿಳಾ ಸಿಬ್ಬಂದಿಯನ್ನು ಕಂಡು ಅಲ್ಲಿಗೆ ಆಗಮಿಸಿದರು. ಮಹಿಳಾ ಪೊಲೀಸ್ ಸಿಬ್ಬಂದಿ ಬಳಿ ಅಶ್ಲೀಲವಾಗಿ ಮಾತನಾಡಲು ಆರಂಭಿಸಿದರು. ಕಾರಿನ ಬಾಗಿಲು ತೆರೆದು ಒಬ್ಬ ಮಹಿಳಾ ಸಿಬ್ಬಂದಿಯನ್ನು ಕಾರಿನಿಂದ ಹೊರದಬ್ಬಲು ಕೂಡ ಪ್ರಯತ್ನಿಸಿದರು.
ಅಷ್ಟರಲ್ಲಿ ವೈಯಾಲಿಕಾವಲ್ ಪೊಲೀಸ್ ಕಾನ್ಸ್ಟೇಬಲ್ ಕೂಡಲೇ ಸ್ಥಳಕ್ಕೆ ಆಗಮಿಸಿದರು. ಅವರ ಜೊತೆ ಕೂಡ ಅನುಚಿತವಾಗಿ ವರ್ತಿಸಲಾರಂಭಿಸಿದರು. ಕೂಡಲೇ ಅವರನ್ನು ಬಂಧಿಸಿ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ಕರೆತರಲಾಯಿತು. 
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 354(ಎ), 353, 504 ಮತ್ತು 506ರಡಿಯಲ್ಲಿ ಕೇಸು ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT