ರಾಜ್ಯ

ಸಿಎಂ ಹೊನ್ನಾವರ ಭೇಟಿ; ಕೋಮು ಗಲಭೆ, ಇಬ್ಬರಿಗೆ ಗಾಯ

Sumana Upadhyaya
ಹೊನ್ನಾವರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೊನ್ನಾವರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕೋಮು ಘರ್ಷಣೆಯುಂಟಾಗಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಒಂದು ಕೋಮಿನ ಯುವಕನ ದ್ವಿಚಕ್ರ ವಾಹನಕ್ಕೆ ಇನ್ನೊಂದು ಕೋಮಿನ ಆಟೋ ಚಾಲಕ ಆಟೋ ಡಿಕ್ಕಿ ಹೊಡೆಸಿದ ಸಂಬಂಧ ಎರಡು ಕೋಮುಗಳ ಯುವಕರು ಕಲ್ಲುತೂರಾಟ ನಡೆಸಿ ದೊಣ್ಣೆಗಳನ್ನ ಹಿಡಿದು ಹೊಡೆದಾಡಿಕೊಂಡ ಘಟನೆ ಹೊನ್ನಾವರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಗಲಭೆಯಲ್ಲಿ ಗಾಯಗೊಂಡ ಶರತ್ ಮಹಾಲೆ ಮತ್ತು ನರಸಿಂಹ ಮೇಸ್ತರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಟೆಂಪೋಗಳ ಗಾಜುಗಳು ಪುಡಿ ಪುಡಿಯಾಗಿವೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಗಲಭೆ ನಿರತ ಹತ್ತಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆದಿದ್ದಾರೆ. ಸದ್ಯ ಗಲಭೆ ನಿಯಂತ್ರಣಕ್ಕೆ ಬಂದಿದ್ದು ಬಸ್ ನಿಲ್ದಾಣ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಬಳಿ ನಾಕಾಬಂದಿ ಹಾಕಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. 
ಮೂರು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಚಂದಾವರದಲ್ಲಿ ಧ್ವಜ ನೆಡುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಗಲಭೆಯುಂಟಾಗಿ 27 ಮಂದಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.
SCROLL FOR NEXT