ರಾಜ್ಯ

ಕಾಸರಗೋಡು: ಮಂಡ್ಯ ಅಯ್ಯಪ್ಪ ಭಕ್ತರ ಬಸ್ ಮೇಲೆ ಕಲ್ಲು ತೂರಾಟ, ಬಸ್ ಮುಂಭಾಗದ ಗಾಜು ಜಖಂ

Raghavendra Adiga
ಕಾಸರಗೋಡು: ಮಂಡ್ಯದಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಸ್ವಾಮಿ ಭಕ್ತರ ಬಸ್ಸಿಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಬಸ್ಸಿನ ಮುಂಭಾಗದ ಗಾಜು ಪುಡಿಯಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ. ಸದ್ಯ ಮಂಡ್ಯದ  ಭಕ್ತರಿಗೆ ಕಾಸರಗೋಡಿನ ಅಯ್ಯಪ್ಪ ಸೇವಾ ಸಂಘದಲ್ಲಿ ಆಶ್ರಯ ನೀಡಲಾಗಿದೆ.
ಕರಾಳ ದಿನ ಆಚರಣೆ 
ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಕರಾಳ ದಿನ ಆಚರಿಸಲಾಗಿದೆ. ಈ ವೇಳೆ ಕರ್ನಾಟಕದಿಂದ ಕೇರಳ ಹಾಗೂ ಕೇರಳದಿಂದ ಕರ್ನಾಟಕದತ್ತ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್, ಇತರೆ ವಾಹನಗಳ ಮೇಲೆ  ಕಲ್ಲು ತೂರಾಟ ನಡೆದಿದೆ. ಕರಾಳ ದಿನ ಹಿನ್ನೆಲೆಯಲ್ಲಿ   ಮುಸ್ಲಿಮ್ ಸಂಘಟನೆಯೊಂದರ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆಂದು ಶಂಕಿಸಲಾಗಿದೆ.
SCROLL FOR NEXT