ಹುಬ್ಬಳ್ಳಿ: ಹುಬ್ಬಳ್ಳಿಯ ಗಣೇಶ ಪೇಟೆ ಪಾಕಿಸ್ತಾನದಂತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿ ಅಬ್ದುಲ್ ಹಮೀದ್ ಖೈರಾತಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಖೈರಾತಿ ಅವರನ್ನು ನಾಲ್ಕನೇ ಜೆಎಂಎಫ್ಸಿ ನ್ಯಾಯಾಧೀಶೆ ದೀಪ್ತಿ ನಾಡಗೌಡ ಅವರೆದುರು ಹಾಜರುಪಡಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಡಿ.2 ರಂದು ಈದ್ ಸಂದರ್ಭ ಗಣೇಶಪೇಟೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮೌಲ್ವಿ ಗಣೇಶ ಪೇಟೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದರು. ಗಣ್ಯ ಅಧಿಕಾರಿಗಳೆದುರಲ್ಲೇ ಮೌಲ್ವಿ ಈ ಹೇಳಿಕೆ ನೀಡಿದ್ದು ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಸ್ವತಃ ಎಸಿಪಿ ದಾವೂದ್ ಖಾನ್ ಅವರೇ ಮೌಲ್ವಿ ವಿರುದ್ಧ ಶಾಂತಿ ಭಂಗ ಮತ್ತು ಪ್ರಚೋದನಾತ್ಮಕ ಹೇಳಿಕೆ ಪ್ರಕರಣ ದಾಖಲಿಸಿಕೊಂಡಿದ್ದರು.