ಅನಂತ್ ಕುಮಾರ್ ಹೆಗಡೆ 
ರಾಜ್ಯ

ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ, ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್

ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರ್ನಲ್ಲಿ ಬಿಜೆಪಿಯ ಪರಿವರ್ತನ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ.......

ಮೈಸೂರು: ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರ್ನಲ್ಲಿ ಬಿಜೆಪಿಯ ಪರಿವರ್ತನ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಅವರ ವಿರುದ್ಧ ಮೈಸೂರು ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮೈಸೂರು ಜಿಲ್ಲೆಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಸವರಾಜ ನಾಯ್ಕ ರಿಂದ ಸಲ್ಲಿಸಲಾದ ಅರ್ಜಿಯೊಂದನ್ನು ಅನುಸರಿಸಿ ಪೋಲೀಸರು ಕ್ರಮ ತೆಗೆದುಕೊಳ್ಳುವಂತೆ ನ್ಯಾಯಾಲಯ ಸೂಚನೆ ನೀಡಿದೆ. ನವೆಂಬರ್ 25 ರಂದು ದೇವರಾಜ ಪೊಲೀಸ್ ಠಾಣೆಯಲ್ಲಿ ನಾಯ್ಕ, ಹೆಗಡೆ ವಿರುದ್ಧ ದೂರು ಸಲ್ಲಿಸಿದ್ದರು. ಪೊಲೀಸ್ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪಾಳ್ಯ ಸುರೇಶ್ ನೇತೃತ್ವದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ವಕೀಲರ ಸಮಿತಿಯು ನವೆಂಬರ್ 30 ರಂದು ನಾಲ್ಕನೇ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಿದೆ. 
ಫಿರ್ಯಾದಿ ಪರವಾಗಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ದೂರುಗಳ ಆಧಾರದ ಮೇಲೆ ಮತ್ತಷ್ಟು ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ  ನಿರ್ದೇಶನ ನೀಡಿದರು. ಅಂತೆಯೇ, ಪೊಲೀಸರು ಐಪಿಸಿ ಸೆಕ್ಷನ್ 153 (ಎ) ಮತ್ತು 504 ಅಡಿಯಲ್ಲಿ ಸಂಸದರ ವಿರುದ್ಧ ಎಫ್ ಐಆರ್ (ಸಂಖ್ಯೆ-230/2017) ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT