ದೀಕ್ಷಿತ್ ಶೆಟ್ಟಿ 
ರಾಜ್ಯ

ಬೆಂಗಳೂರು: ಸೆಲ್ಫಿಗೆ ನಿರಾಕರಿಸಿದ 'ನಾಗಿಣಿ' ನಟನ ಮೇಲೆ ಹಲ್ಲೆ

ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ನಿರಾಕರಿಸಿದ ಎಂಬ ಕಾರಣಕ್ಕೆ ಕನ್ನಡದ ಕಿರುತೆರೆ ನಟ ದೀಕ್ಷಿತ್ ಶೆಟ್ಟಿ ಅವರ ಮೇಲೆ ಯುವಕರ...

ಬೆಂಗಳೂರು: ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ನಿರಾಕರಿಸಿದ ಎಂಬ ಕಾರಣಕ್ಕೆ ಕನ್ನಡದ ಕಿರುತೆರೆ ನಟ ದೀಕ್ಷಿತ್ ಶೆಟ್ಟಿ ಅವರ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ವಿಜಯನಗರದಲ್ಲಿ ನಡೆದಿದೆ.
'ನಾಗಿಣಿ' ಧಾರವಾಹಿಯ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ದೀಕ್ಷಿತ್ ಶೆಟ್ಟಿ ಅವರು ನಿನ್ನೆ ರಾತ್ರಿ 9.30ರ ಸುಮಾರಿಗೆ ತಮ್ಮ ಕಾರಿನಲ್ಲಿ ವಿಜಯನಗರದ ಮಾರುತಿ ಮಂದಿರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. 
ದೀಕ್ಷಿತ್ ಶೆಟ್ಟಿ ದೇವರ ದರ್ಶನ ಪಡೆದು ವಾಪಸ್ ಮನೆಗೆ ತೆರಳುತ್ತಿದ್ದ ವೇಳೆ ಅವರ ಕಾರನ್ನು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ ಮೂವರು ಯುವಕರು, ಕಾರನ್ನು ತಡೆದು ತಮ್ಮೊಂದಿಗೆ ಸೆಲ್ಫಿ ತೆಗೆಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ. ಆದರೆ ಯುವಕರು ಪಾನಮತ್ತರಾಗಿದ್ದರಿಂದ ದೀಕ್ಷಿತ್ ಶೆಟ್ಟಿ ಸೆಲ್ಫಿಗೆ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕರು ನಟನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕಾರಿನ ಮೇಲೂ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.
ಘಟನೆ ನಂತರ ನಟ ದೀಕ್ಷಿತ್ ವಿಜಯನಗರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿರುವುದಾಗಿ ಮತ್ತು ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯ ಪರಿಶೀಲಿಸುತ್ತಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ ಘಟನೆಯಲ್ಲಿ ಸ್ಥಳೀಯ ಯುವಕರ ಪಾತ್ರವಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್