ರಾಜ್ಯಪಾಲ ವಜುಬಾಯಿ ವಾಲಾ 
ರಾಜ್ಯ

ಬಡ್ತಿ ಮೀಸಲಾತಿ: ಮಸೂದೆ ಅನುಮೋದನೆಗೆ ರಾಷ್ಟ್ರಪತಿಗೆ ಕಳುಹಿಸಿದ ರಾಜ್ಯಪಾಲರು

ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವ ಕುರಿತು ....

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವ ಕುರಿತು ರಾಜ್ಯ ವಿಧಾನಮಂಡಲ ಅಂಗೀಕರಿಸಿರುವ ಮಸೂದೆಯನ್ನು ರಾಜ್ಯಪಾಲ ವಜುಬಾಯಿ ವಾಲಾ ರಾಷ್ಟ್ರಪತಿ ಅವರ ಅನುಮೋದನೆಗೆ ಕಳುಹಿಸಿಕೊಟ್ಟಿದ್ದಾರೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಈ ವಿಷಯ ತಿಳಿಸಿ, ಈ ಮೀಸಲಾತಿ ಅವಕಾಶವನ್ನು ರದ್ದುಪಡಿಸಿ ಸುಪ್ರೀಂಕೋರ್ಟ್ ನೀಡಿದ್ದ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ವಿಧಾನಮಂಡಲ ಈಚೆಗೆ ಈ ಮಸೂದೆಯನ್ನು ಅಂಗೀಕರಿಸಿದೆ ಎಂದು ಹೇಳಿದರು.
ರಾಜ್ಯಪಾಲರು, ಮಸೂದೆಯನ್ನು ರಾಷ್ಟ್ರಪತಿಯವರ ಅವಗಾಹನೆಗೆ ಕಳುಹಿಸಿಕೊಡಲು ಕಾರಣಗಳೇನು ಎಂಬುದನ್ನು ಸಚಿವರು ತಿಳಿಸಲಿಲ್ಲ.ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಸುಮಾರು ಶೇಕಡಾ 80ರಷ್ಟು ಇಲಾಖೆಗಳಲ್ಲಿ ಹೊಸ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದು ಜಯಚಂದ್ರ ತಿಳಿಸಿದರು. ಸುಪ್ರೀಂಕೋರ್ಟ್ ಆದೇಶವನ್ನು ಬರುವ ಜನವರಿ 15 ರೊಳಗೆ ಅನುಷ್ಠಾನಗೊಳಿಸಬೇಕಿದೆ.
ಮಸೂದೆಯನ್ನು ಈಗ ರಾಷ್ಟ್ರಪತಿ ಅವರ ಅನುಮೋದನೆಗೆ ಕಳುಹಿಸಿಕೊಟ್ಟಿರುವುದರಿಂದ, ಸುಪ್ರೀಂಕೋರ್ಟ್ ಆದೇಶ ಜಾರಿಗೊಳಿಸಬೇಕೇ ಹೇಗೆ ಎಂಬ ಬಗ್ಗೆ ಸರ್ಕಾರ ಕಾನೂನು ಅಭಿಪ್ರಾಯ ಪಡೆಯಲಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT