ಕೋಲಾರ: ಕೋಲಾರದ ತಂಬಿಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ರಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಮುಳಬಾಗಿಲಿನಿಂದ ಕೋಲಾರಕ್ಕೆ ತೆರಳುತ್ತಿದ್ದ ಮರಳು ತುಂಬಿದ್ದ ಟ್ರ್ಯಾಕ್ಟರ್ ಗೆ ಕಾರ್ ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಈ ಅವಘಡ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರ ಗುರುತಿ ಇನ್ನೂ ಪತ್ತೆಯಾಗಿಲ್ಲ. ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಟ್ರ್ಯಾಕ್ಟರ್ ಗೆ ಗುದ್ದಿದ ಕಾರ್ ಸಂಪೂರ್ಣ ಜಖಂಗೊಂಡಿದೆ.