ರಾಯಚೂರು: ಸಿರಿಧಾನ್ಯಕ್ಕೆ ಒತ್ತು ನೀಡುವ ಉದ್ದೇಶದಿಂದ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನಿನ್ನೆಯಿಂದ ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕೃಷಿ ಮೇಳಕ್ಕೆ ನವಲಕಲ್ ಮಠದ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.
ಸುಮಾರು 200ಕ್ಕೂ ಹೆಚ್ಚು ಮಳಿಗೆಗಳ ಉದ್ಘಾಟನೆಯನ್ನು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಎಂ.ಸಾಲಿಮಠ ನೆರವೇರಿಸಿದರು.ಈ ವೇಳೆ ಮಾತನಾಡಿದ ಸ್ವಾಮೀಜಿ, ಸಿರಿಧಾನ್ಯ ಸೇವನೆಯ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲುವ ಅವಶ್ಯಕತೆ ಇದೆ ಎಂದು ಹೇಳಿದರು.
ಕುಲಪತಿ ಡಾ. ಸಾಲಿಮಠ, ಕೃಷಿ ವಿಶ್ವವಿದ್ಯಾಲಯವು ಹೊಸ ಹೊಸ ಸಂಶೋಧನೆಯ ಜತೆಗೆ, ಅತಿವೃಷ್ಟಿ ಮತ್ತು ಅನಾವೃಷ್ಟಿಯ ಸಂದರ್ಭದಲ್ಲಿ ಅನುಸರಿಸಬೇಕಾದ ಮಾಹಿತಿಯನ್ನು ರೈತರಿಗೆ ನೀಡಲು ಸಿದ್ಧವಿದೆ, ಇದರ ಸದುಪಯೋಗವನ್ನು ರೈತಾಪಿವರ್ಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.