ಸಂಗ್ರಹ ಚಿತ್ರ 
ರಾಜ್ಯ

ರವಿ ಬೆಳಗೆರೆ ಬಂಧನದ ಬೆನ್ನಲ್ಲೇ 2ನೇ ಪತ್ನಿ ನಾಪತ್ತೆ?

ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ "ಹಾಯ್‌ ಬೆಂಗಳೂರು' ಪತ್ರಿಕೆ ಸಂಪಾದಕ ರವಿ ಬೆಳಗೆರೆಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ ಬೆನ್ನಲ್ಲೇ ಅವರ 2 ನೇ ಪತ್ನಿ ನಾಪತ್ತೆಯಾಗಿದ್ದಾರೆ ಎಂಬ ವರದಿಗಳು ಕೇಳಿಬಂದಿವೆ.

ಬೆಂಗಳೂರು: ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ "ಹಾಯ್‌ ಬೆಂಗಳೂರು' ಪತ್ರಿಕೆ ಸಂಪಾದಕ ರವಿ ಬೆಳಗೆರೆಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ ಬೆನ್ನಲ್ಲೇ ಅವರ 2 ನೇ ಪತ್ನಿ ಯಶೋಮತಿ ನಾಪತ್ತೆಯಾಗಿದ್ದಾರೆ ಎಂಬ ವರದಿಗಳು ಕೇಳಿಬಂದಿವೆ.
ಮಾಧ್ಯಮಗಳು ವರದಿ ಮಾಡಿರುವಂತೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಯಶೋಮತಿ ಅವರ ಮನೆಗೆ ನಿನ್ನೆ ಸಂಜೆಯಿಂದ ಬೀಗ ಹಾಕಲಾಗಿದ್ದು, ಇಲ್ಲಿಯವರೆಗೂ ಆ ಮನೆಗೆ ಯಾರೂ ಬಂದಿಲ್ಲ. ಅಲ್ಲದೆ ಬೆಳಗೆರೆ ಪತ್ನಿ ಯಶೋಮತಿ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಅವರ ಫೇಸ್ ಬುಕ್ ಖಾತೆ ಕೂಡ ಸ್ಥಗಿತವಾಗಿದೆ. ಸಿಸಿಬಿ ಪೊಲೀಸರ ವಿಚಾರಣೆಗೆ ಹೆದರಿ ಯಶೋಮತಿ ಅವರ ನಾಪತ್ತೆಯಾಗಿರಬಹುದು ಎಂದು ವರದಿಯಲ್ಲಿ ಶಂಕಿಸಲಾಗಿದೆ.
ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಲೇಔಟ್‌ ನಲ್ಲಿರುವ ನಿವಾಸದಲ್ಲಿ ಯಶೋಮತಿ ಅವರು ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಸುಪಾರಿ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ  ವಿಚಾರಣೆ ನಡೆಸುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 
2ನೇ ದಿನವೂ ಸತತ ವಿಚಾರಣೆ
ಪ್ರಸ್ತುತ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರವಿ ಬೆಳಗೆರೆ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸುತ್ತಿದ್ದು, ಪುತ್ರಿ ಚೇತನಾ ಬೆಳಗೆರೆ ಅವರು ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ಬಳಿಯಿರುವ ರವಿ ಬೆಳಗೆರೆ ಅವರ ತೋಟದ ಮನೆ, ಚಿಕ್ಕಮಗಳೂರಿನಲ್ಲಿರುವ ಕಾಫಿ ಎಸ್ಟೇಟ್‌ ನಲ್ಲೂ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ ಎಂದು ವರದಿಯಾಗಿದೆ. 
ಅರಣ್ಯಾಧಿಕಾರಿಗಳಿಂದ ತನಿಖೆ
ಬೆಂಗಳೂರಿನ ಹಾಯ್ ಬೆಂಗಳೂರು ಕಚೇರಿಯಲ್ಲಿ ಸುಮಾರು 50 ವರ್ಷ ಹಳೆಯದಾದ ಜಿಂಕೆಯ ಚರ್ಮ ಮತ್ತು ಆಮೆಯ ಚಿಪ್ಪು ಪತ್ತೆಯಾಗಿರುವ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವ ಸಾಧ್ಯತೆಗಳಿವೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಸಿಸಿಬಿ ಅಧಿಕಾರಿಗಳು ಪತ್ರ ಬರೆದಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT