ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ನಿಜಲಿಂಗಪ್ಪ ಅವರಿಗೆ ಭಾರತರತ್ನ ಪ್ರಶಸ್ತಿ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ದೇಶ ಕಂಡ ಅಪ್ರತಿಮ ನಾಯಕ, ಕೈ, ಬಾಯಿ ಶುದ್ಧವಾಗಿಟ್ಟುಕೊಂಡಿದ್ದ ಜನನಾಯಕ, ನೀರಾವರಿ ಕ್ಷೇತ್ರದಲ್ಲಿ ಅತ್ಯುನ್ನತ ಕೊಡುಗೆಗಳನ್ನು ನೀಡಿರುವ ನಿಜಲಿಂಗಪ್ಪ ಅವರಿಗೆ ಭಾರತರತ್ನ ಪ್ರಶಸ್ತಿ ಹಾಗೂ ದೆಹಲಿಯ ಸಂಸತ್ ಭವನದ ಆವರಣದಲ್ಲಿ ಪ್ರತಿಮೆಯನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ವಿಧಾನಸೌಧದಲ್ಲಿ ಹೇಳಿದರು.
ನಿಜಲಿಂಗಪ್ಪ ಅವರ 115ನೇ ಜನ್ಮದಿನಾಚರಣೆಯ ಅಂಗವಾಗಿ ವಿಧಾನಸೌಧದ ಪಶ್ತಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸಲ್ಲಿಸಿದ ಮನವಿಗೆ ಈ ಭರವಸೆ ನೀಡಿದರು.