ರವಿ ಬೆಳಗೆರೆ - ವಿಜು ಬಡಿಗೇರ್
ಮೀರಜ್: 'ಹಾಯ್ ಬೆಂಗಳೂರು' ಸಂಪಾದಕ ರವಿ ಬೆಳಗೆರೆ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು, ಸೋಮವಾರ ಮತ್ತೊಬ್ಬ ಆರೋಪಿ ವಿಜು ಬಡಿಗೇರ್ ನನ್ನು ಮಹಾರಾಷ್ಟ್ರದ ಮೀರಜ್ ನಲ್ಲಿ ಬಂಧಿಸಿದ್ದಾರೆ.
ತಪ್ಪಿಸಿಕೊಂಡಿದ್ದ ರವಿ ಬೆಳಗೆರೆಯಿಂದ ಸುಪಾರಿ ಪಡೆದಿದ್ದ ಭೀಮಾತೀರದ ಹಂತಕ ಶಶಿಧರ್ ಮುಂಡೆವಾಡಿ ಅಳಿಯ ವಿಜು ಬಡಿಗೇರ್ ಮಹಾರಾಷ್ಟ್ರ ಪೊಲೀಸರ ನೆರವಿನೊಂದಿಗೆ ಇಂದು ಸಂಜೆ ಮೀರಜ್ ರೈಲ್ವೆ ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ.
ಇಂದು ಬೆಳಗ್ಗೆಯಿಂದಲೇ ವಿಜು ಬಡಿಗೇರ್ ಗಾಗಿ ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದ ಕಂಟೆಪ್ಪನ ಪ್ಲಾಟ್ ನಲ್ಲಿರುವ ವಿಜು ಬಡಿಗೇರ ಮನೆ ಸೇರಿದಂತೆ ವಿವಿಧ ಕಡೆ ಪೊಲೀಸರು ತೀವ್ರ ಶೋಧ ನಡೆಸಿದ್ದರು. ಅಂತಿಮವಾಗಿ ಮೀರಜ್ ನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.