ಮಂಗಳೂರು: ಮಂಗಳೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಸಾಮರಸ್ಯ ನಡಿಗೆ ಸೌಹಾರ್ದತೆಯೆಡೆಗೆ ಪಾದಯಾತ್ರೆಯ ವೇಳೆ ಕಲ್ಲುತೂರಾಟಗಾರರ ಗುಂಪು 2 ಕೆಎಸ್ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಫರಂಗಿ ಪೇಟೆಯಲ್ಲಿ ಈ ಘಟನೆ ನಡೆದಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಪಾದಯಾತ್ರೆಯ ಹಿನ್ನೆಲೆಯಲ್ಲಿ ಫರಂಗಿ ಪೇಟೆಯ ಪ್ರಮುಖ ಪ್ರದೇಶಗಳಲ್ಲಿ 500 ಕ್ಕೂ ಹೆಚ್ಚು ರಾಜ್ಯ ಮೀಸಲು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.
ಪಾದಯಾತ್ರೆ ಆರಂಭವಾಗುವುದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ್ ರೈ ಅವರು ಪಾದಯಾತ್ರೆಯುದ್ದಕ್ಕೂ ಶಾಂತಿ ಕಾಪಾಡುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದರು. ಒಂದು ವೇಳೆ ಪಾದಯಾತ್ರೆಯ ಬಗ್ಗೆ ನಕಾರಾತ್ಮಕ ಹೇಳಿಕೆಗಳು ಬಂದರೂ ಸಹ ಯಾರೂ ಅಕ್ರೋಶಗೊಳ್ಳಬಾರದು, ಕೋಮು ಸೌಹಾರ್ದತೆ ಕಾಪಾಡುವುದು ನಮ್ಮ ಉದ್ದೇಶ ಎಂದು ರಾಮಾನಾಥ್ ರೈ ಹೇಳಿದ್ದರು.
ನಟ ಪ್ರಕಾಶ್ ರೈ, ಶಾಸಕಿ ಶಕುಂತಲಾ ಶೆಟ್ಟಿ, ಜೆಆರ್ ಲೋಬೋ, ವಸಂತ್ ಬಂಗೇರಾ, ಅಭಯ್ ಚಂದ್ರ ಜೈನ್, ಪರಿಷತ್ ನ ಮುಖ್ಯ ಸಚೇತಕ ಐವಾನ್ ಡಿಸೋಜಾ ಸೇರಿದಂತೆ ಹಲವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics