ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಶಿರಸಿ ಹಿಂಸಾಚಾರ: ಇದೆಲ್ಲಾ ರಾಷ್ಟ್ರೀಯ ಪಕ್ಷಗಳ ಹುನ್ನಾರ- ಕುಮಾರಸ್ವಾಮಿ ವಾಗ್ದಾಳಿ

ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣವನ್ನೇ ದೊಡ್ಡದು ಮಾಡಲಾಗುತ್ತಿದ್ದು ಇದೆಲ್ಲಾ ರಾಷ್ಟ್ರೀಯ ಪಕ್ಷಗಳ ಹುನ್ನಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ...

ಬೆಂಗಳೂರು: ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣವನ್ನೇ ದೊಡ್ಡದು ಮಾಡಲಾಗುತ್ತಿದ್ದು ಇದೆಲ್ಲಾ ರಾಷ್ಟ್ರೀಯ ಪಕ್ಷಗಳ ಹುನ್ನಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಶಿರಸಿಯಲ್ಲಿ ಉಂಟಾದ ಹಿಂಸಾಚಾರದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು ರಾಷ್ಟ್ರೀಯ ಪಕ್ಷಗಳು ಜನರಲ್ಲಿ ಭಯಭೀತಿ ಹುಟ್ಟಿಸುವಂತಹ ವಾತಾವರಣ ಸೃಷ್ಟಿ ಮಾಡುತ್ತಿವೆ. ಸಣ್ಣ ಘಟನೆಗಳನ್ನೇ ದೊಡ್ಡದು ಮಾಡುತ್ತಿದ್ದು ಇದರಲ್ಲಿ ಅಮಾಯಕರನ್ನು ಬಲಿ ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
ಹಿಂಸಾಚಾರದ ಹಿನ್ನೆಲೆಯಲ್ಲಿ ನಾನು ಹಿಂದೂ ಸಂಘಟನೆಗಳು ಹಾಗೂ ಮುಸ್ಲಿಂರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದು ರಾಷ್ಟ್ರೀಯ ಪಕ್ಷಗಳ ಚಿತಾವಣೆಯಿಂದ ಶಾಂತಿ ವಾತಾವರಣ ಕಲುಷಿತಗೊಳಿಸುತ್ತಿವೆ. ಹೀಗಾಗಿ ಇಂತಹ ಚಿತಾವಣೆಗೆ ಬಲಿಯಾಗಬೇಡು ಎಂದು ಹೇಳಿದ್ದಾರೆ. 
ಇನ್ನು ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಳ್ಳುತ್ತಿದ್ದು ಇಷ್ಟೆಲ್ಲಾ ಆದರೂ ಈ ಸರ್ಕಾರ ಏನು ಮಾಡುತ್ತಿದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಡಳಿತದಲ್ಲಿ ಹಿಡಿತ ತಪ್ಪಿದೆ. ಕುಮಟಾದಲ್ಲಿ ಡಿಐಜಿ ಶ್ರೇಣಿಯ ಅಧಿಕಾರಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್ ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ಪ್ರಶ್ನಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!