ರಾಜ್ಯದ 11 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಎಸಿಬಿ ದಾಳಿ
ರಾಜ್ಯದ ಹನ್ನೊಂದು ಮಂದಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಭ್ರಷ್ಟಾಚಾರ...
ಬೆಂಗಳೂರು: ರಾಜ್ಯದ ಹನ್ನೊಂದು ಮಂದಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸಿದ್ದಾರೆ.
ಇಂದು ಬೆಳಗ್ಗೆ ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ವಿವಿಧ ತಂಡಗಳು 11 ಜನ ಸರ್ಕಾರಿ ನೌಕರರು ಅಕ್ರಮ ಆಸ್ತಿ ಗಳಿಸಿರುವ ಬಗ್ಗೆ ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿ ಸಂಗ್ರಹಿಸಿ ರಾಜ್ಯಾದ್ಯಂತ ಏಕಕಾಲಕ್ಕೆ ಅವರಿಗೆ ಸಂಬಂಧಿಸಿದ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದರು.
ಬಳ್ಳಾರಿಯ ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎಸ್.ಷಾಷಾವಲಿ, ಕಲಬುರಗಿಯ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಹೆಚ್.ಬಿ.ಮಲ್ಲಪ್ಪ, ಬಂಟ್ವಾಳದ ಕೃಷಿ ಸಹಾಯಕ ನಿರ್ದೇಶಕ ಫ್ರಾನ್ಸಿಸ್ ಫೌಲ್ ಮಿರಾಂಡಾ, ಕೊರಟಗೆರೆಯ ಪಿಡಬ್ಲ್ಯೂಡಿ ಸಹಾಯಕ ಕಾರ್ಯಕಾರಿ ಇಂಜಿನಿಯರ್ ಜಿ.ಸಿ.ಜಗದೀಶ್, ಚಿಕ್ಕಬಳ್ಳಾಪುರದ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಕಾರಿ ಇಂಜಿನಿಯರ್ ಡಿ.ಹೇಮಂತ್, ಬೆಂಗಳೂರಿನ ಕಾರ್ಮಿಕ ಭವನದ ಫ್ಯಾಕ್ಟರಿ ಮತ್ತು ಬಾಯ್ಲರ್ಸ್ ನ ಜಂಟಿ ನಿರ್ದೇಶಕ ಎಸ್.ಎಂ. ವಾಸಣ್ಣ, ಬೆಂಗಳೂರಿನ ಟೌನ್ ಅಂಡ್ ಕಂಟ್ರಿ ಪ್ಲಾನಿಂಗ್ ನ ಜಂಟಿ ನಿರ್ದೇಶಕ ಎಂ.ಸಿ.ಶಶಿಕುಮಾರ್, ಬೆಂಗಳೂರಿನ ಬಸವನಗುಡಿಯ ಉಪ ವಿಭಾಗದ ಬಿಬಿಎಂಪಿ ಸಹಾಯಕ ಇಂಜಿನಿಯರ್ ಜೆ.ವಿ.ತ್ಯಾಗರಾಜ್, ಮಂಡ್ಯ ಜಿಲ್ಲಾ ಪಂಚಾಯತ್ ನ ಕಾರ್ಯಕಾರಿ ಇಂಜಿನಿಯರ್ ಚಂದ್ರಹಾಸ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಅರಣ್ಯ ಸಹಾಯಕ ಪಾಂಡುರಂಗ ಕೇಶವ ಪೈ ಮತ್ತು ಬೆಳಗಾವಿ ಜಿಲ್ಲೆಯ ಪಿಡಬ್ಲ್ಯೂಡಿ ಇಲಾಖೆಯ ಸಹಾಯಕ ಕಾರ್ಯಕಾರಿ ಇಂಜಿನಿಯರ್ ಸುರೇಶ್ ಭೀಮಾ ನಾಯ್ಕ್ ಅವರ ನಿವಾಸ ಹಾಗೂ ಮನೆ ಮೇಲೆ ದಾಳಿ ನಡೆದಿದೆ.
ಈ ಸರ್ಕಾರಿ ಅಧಿಕಾರಿಗಳು ಗಳಿಸಿರುವ ಅಕ್ರಮ ಆಸ್ತಿ ಪಾಸ್ತಿಗಳ ಪರಿಶೀಲನೆ ಮುಂದುವರಿದಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಪ್ರಕಟಣೆಯಲ್ಲಿ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.