ರಾಜ್ಯ

ಕವಿ ಚೆನ್ನವೀರ ಕಣವಿಗೆ 'ಸಿದ್ದಗಂಗಾ ಶ್ರೀ' ಪ್ರಶಸ್ತಿ

Raghavendra Adiga
ತುಮಕೂರು: ಕನ್ನಡದ ಹಿರಿಯ ಕವಿ ಚೆನ್ನವೀರ ಕಣವಿ ಅವರಿಗೆ ಸಿದ್ದಗಂಗಾ ಶ್ರೀ ಪುರಸ್ಕಾರ ಲಭಿಸಿದೆ. ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘವು ಪ್ರತಿ ವರ್ಷ ಕೊಡಮಾಡುವ ಈ ಪ್ರಶಸ್ತಿ 1 ಲಕ್ಷ ರೂ. ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.
ಸಾಹಿತ್ಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸಿ ನೀಡಲಾಗುವ ಪುರಸ್ಕಾರಕ್ಕೆ ಈ ಬಾರಿ ಕಣವಿ ಅವರು ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ನೀದಲಾಗುವ  ‘ಸಿದ್ಧಗಂಗಾ ಶಿವಕುಮಾರಶ್ರೀ ಪ್ರಶಸ್ತಿ' ಗೆ ಚನ ಸಾಹಿತ್ಯದಲ್ಲಿ ಹೆಸರು ಮಾಡಿರುವ ಬೀದರ್‌ನ ಅಕ್ಕ ಅನ್ನಪೂರ್ಣ ತಾಯಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತಿ ಅವರುಗಳು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10 ಸಾವಿರ ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿದೆ. 
ಈ ಎಲ್ಲಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಡಿ. 17 ರಂದು ಸಿದ್ದಗಂಗಾಮಠದ ಆವರಣದಲ್ಲಿ ಡಾ.ಶಿವಕುಮಾರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದ್ದು ಅಂದು ಸಂಘದ 63ನೇ ಸರ್ವಸದಸ್ಯರ ಮಹಾ ಅಧಿವೇಶನ ಇರಲಿದೆ.
SCROLL FOR NEXT