ರಾಮಲಿಂಗಾ ರೆಡ್ಡಿ 
ರಾಜ್ಯ

ಪರೇಶ್ ಮೇಸ್ತಾ ಸಾವಿನ ಪ್ರಕರಣ ಸಿಬಿಐಗೆ ವಹಿಸಲು ನಿರ್ಧಾರ: ರಾಮಲಿಂಗಾ ರೆಡ್ಡಿ

ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿರುವ ಹಿಂದೂ ಸಂಘಟನೆಯ ಕಾರ್ಯಕರ್ತ....

ಬೆಂಗಳೂರು: ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿರುವ ಹಿಂದೂ ಸಂಘಟನೆಯ ಕಾರ್ಯಕರ್ತ ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಹೇಳಿದ್ದಾರೆ.
ಇಂದು ಪರಪ್ಪನ ಅಗ್ರಹಾರ ಜೈಲಿನ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.
ಪರೇಶ್ ಮೇಸ್ತಾ ಮರಣೋತ್ತರ ಪರೀಕ್ಷಾ ವರದಿ ಬರಲು ಇನ್ನು 8ರಿಂದ 10 ದಿನ ಬೇಕು. ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿಯುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ವಿಧಾನಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಅನಗತ್ಯ ಆರೋಪಗಳನ್ನು ಮಾಡುತ್ತಿದೆ. ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪ್ರಕರಣದಲ್ಲೂ ಬಿಜೆಪಿ ಹೀಗೆ ಮಾಡಿತ್ತು. ಕೊನೆಗೆ ಸಿಬಿಐ ಸಹ ಕ್ಲೀನ್ ಚಿಟ್ ನೀಡಿದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು,
ಪರಮೇಶ್ ಮೇಸ್ತಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಲು ತೀರ್ಮಾನಿಸಿರುವುದಾಗಿ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ,.
ಬಿಜೆಪಿ ನಾಯಕರ ಒತ್ತಾಯಕ್ಕೆ ಮಣಿದು ನಾವು ಪ್ರಕರಣವನ್ನು ಸಿಬಿಐಗೆ ವಹಿಸುತ್ತಿಲ್ಲ. ಮೇಸ್ತಾ ಅವರ ಕುಟುಂಬದ ಒತ್ತಾಸೆಯಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವು ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಿರಸಿ ಹಾಗೂ ಕುಮಟಾದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)