ಸನ್ನಿ ಲಿಯೋನ್ 
ರಾಜ್ಯ

ಸನ್ನಿ ಲಿಯೋನ್ ಕಾರ್ಯಕ್ರಮ ಆಯೋಜಕರಿಂದ ರಾಮಲಿಂಗಾ ರೆಡ್ಡಿ, ಪೊಲೀಸ್ ಆಯುಕ್ತರ ಭೇಟಿ

ಡಿಸೆಂಬರ್ 31ರ ರಾತ್ರಿ ಮಾಜಿ ನೀಲಿ ತಾರೆ, ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷಾಚರಣೆ ಕಾರ್ಯಕ್ರಮಕ್ಕೆ ಅನುಮತಿ...

ಬೆಂಗಳೂರು: ಡಿಸೆಂಬರ್ 31ರ ರಾತ್ರಿ ಮಾಜಿ ನೀಲಿ ತಾರೆ, ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷಾಚರಣೆ ಕಾರ್ಯಕ್ರಮಕ್ಕೆ ಅನುಮತಿ ನೀಡಲು ನಗರ ಪೊಲೀಸ್ ಆಯುಕ್ತರು ನಿರಾಕರಿಸಿದ್ದು, ಈ ಸಂಬಂಧ ಕಾರ್ಯಕ್ರಮ ಆಯೋಜಕರು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಪೊಲೀಸ್ ಆಯುಕ್ತ ಟಿ ಸುನೀಲ್ ಅವರನ್ನು ಭೇಟಿ ಮಾಡಿ, ನಿರ್ಧಾರ ಮರು ಪರಿಶೀಲಿಸುವಂತೆ ಮನವಿ ಮಾಡಲು ಮುಂದಾಗಿದ್ದಾರೆ.
ಡಿಸೆಂಬರ್ 31ರಂದು ನಗರಾದ್ಯಂತ ಪೊಲೀಸರನ್ನು ನಿಯೋಜಿಸಬೇಕಾಗಿರುವುದರಿಂದ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಹೆಚ್ಚಿನ ಪೊಲೀಸರನ್ನು ನೀಡಲು ಸಾಧ್ಯವಾಗುವುದಿಲ್ಲ ಮತ್ತು ಕೆಲ ಕಿಡಿಕೇಡಿಗಳು ಕಾನೂನು ಸುವ್ಯವಸ್ಥೆ ಧಕ್ಕೆ ತರುವ ಆತಂಕವಿರುವ ಹಿನ್ನೆಲೆಯಲ್ಲಿ ಸನ್ನಿ ಕಾರ್ಯಕ್ರಮಕ್ಕೆ ಅನುಮತಿ ನೀಡುವುದಿಲ್ಲ ಎಂದು ಪೊಲೀಸ್ ಆಯುಕ್ತರು ನಿನ್ನೆ ಹೇಳಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಕಾರ್ಯಕ್ರಮ ಆಯೋಜ ಸಂಸ್ಥೆ ಟೈಮ್ಸ್ ಕ್ರಿಯೇಷನ್ ವ್ಯವಸ್ಥಾಪಕ ನಿರ್ದೇಶಕ ಹರೀಶ್ ಎಂಎಸ್ ಅವರು, ಈ ಸಂಬಂಧ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡುವುದಕ್ಕಾಗಿ ಇಂದು ಬೆಳಗ್ಗೆಯಿಂದ ಯತ್ನಿಸುತ್ತಿದ್ದೇನೆ. ಆದರೆ ಅವರು ಸಿಗುತ್ತಿಲ್ಲ ಎಂದಿದ್ದಾರೆ. ಅಲ್ಲದೆ ಸಚಿವರನ್ನು ಭೇಟಿ ಮಾಡಿದ ಬಳಿಕ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ, ನಿರ್ಧಾರ ಮರು ಪರಿಶೀಲಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ಅವರು ಯಾವ ಕಾರಣಕ್ಕಾಗಿ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಅನುಮತಿ ನೀಡುತ್ತಿಲ್ಲ ಎಂಬುದನ್ನು ಅವರು ನನಗೆ ಲಿಖಿತವಾಗಿ ತಿಳಿಸಲಿ. ಅವರು ಕಾನೂನು ಸುವ್ಯವಸ್ಥೆಯ ಕಾರಣ ನೀಡುತ್ತಿದ್ದಾರೆ. ಆದರೆ ಅದನ್ನೇ ಲಿಖಿತವಾಗಿ ನೀಡಲಿ ಎಂದು ಹರೀಶ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ದೆಹಲಿ-ಚೆನ್ನೈ ಇಂಡಿಗೋ ವಿಮಾನದಲ್ಲಿ ಬೆಂಕಿ; ಹೈದರಾಬಾದ್‌ ನಲ್ಲಿ ತುರ್ತು ಲ್ಯಾಂಡಿಂಗ್