ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರದ ಪ್ರಕರಣದ ತನಿಳೆ ಮಾಹಿತಿಯನ್ನು ನೀಡುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ. ರೂಪ ಆರ್ ಟಿಐ ಅರ್ಜಿ ಸಲ್ಲಿಸಿದ್ದಾರೆ.
ಜೈಲಿನಲ್ಲಿ ಲಂಚ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂದು ಆರೋಪಿಸಿ ರೂಪಾ ಅವರು ಎಸಿಬಿ ಗೆ ದೂರು ನೀಡಿದ್ದರು. ಆಗಸ್ಟ್ ನಲ್ಲಿ ಈ ಸಂಬಂಧ ದೂರು ದಾಖಲಿಸಿದ್ದರೂ ಸಹ ಇದುವರೆಗೆ ಪ್ರಕರಣದ ಬೆಳವಣಿಗೆ ಬಗೆಗೆ ಯಾವ ಮಾಹಿತಿಯೂ ಸಿಕ್ಕಿಲ್ಲ. ಇದಕ್ಕಾಗಿ ರೂಪ ಅವರು ಇದೀಗ ಈ ಸಂಬಂಧ ಮಾಹಿತಿ ನೀಡುವಂತೆ ಕೋರಿ ಆರ್ ಟಿಐ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದ ಅವ್ಯವಹಾರ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತ್ತು. ಇದನ್ನು ಬಯಲಿಗೆಳೆದ ರೂಪಾ ಸೇರಿದಂತೆ ಅನೇಕ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿತ್ತು.