ನಾಳೆ ಪ್ರಧಾನಿ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ
ಓಖಿ ಚಂದಮಾರುತದಿಂದ ಹಾನಿಗೊಂಡ ಪ್ರದೇಶಕ್ಕೆ ಭೇಟಿ ನೀಡಲಿರುವ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮಂಗಳೂರು: ಓಖಿ ಚಂದಮಾರುತದಿಂದ ಹಾನಿಗೊಂಡ ಪ್ರದೇಶಕ್ಕೆ ಭೇಟಿ ನೀಡಲಿರುವ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಕೇರಳ ಪ್ರವಾಸ ಮುಗಿಸುವ ಮೋದಿ ನಾಳೆ (ಡಿ.18) ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ತಂಗಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ರಾತ್ರಿ 11ಕ್ಕೆ ಮಂಗಳೂರಿಗೆ ಆಗಮಿಸುವ ಮೋದಿ ಡಿ.19ರ ಬೆಳಗ್ಗೆ ವಿಶೇಷ ವಿಮಾನದಲ್ಲಿ ಲಕ್ಷದ್ವೀಪಕ್ಕೆ ತೆರಳಲಿದ್ದಾರೆ.
ಗುಜರಾತ್ ವಿಧಾನಸಭೆ ಫಲಿತಾಂಶದ ದಿನವೇ ಆಗಮಿಸುತ್ತಿರುವ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡುತ್ತಿರುವುದು ಇದೇ ಮೊದಲು. ಪ್ರಧಾನಿ ಭೇಟಿಗಾಗಿ ಸರ್ಕ್ಯೂಟ್ ಹೌಸ್ ನಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಂಸದ ಕಟೀಲ್ ಮಾಹಿತಿ ನೀಡಿದ್ದಾರೆ. ಕಳೆದ ತಿಂಗಳಲ್ಲಿ ಪ್ರಧಾನಿ ಮೋದಿ ಧರ್ಮಸ್ಥಳಕ್ಕೆ ಬಂಡಾಗ ಮಂಗಳುರಿಗೆ ಭೇಟಿ ನೀಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.