ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ರಾಜನಾಥ ಸಿಂಗ್ ತೀವ್ರ ಕಿಡಿ

ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ರಾಜ್ಯ ಸರ್ಕಾರದ ವಿರುದ್ದ ಭಾನುವಾರ ತೀವ್ರವಾಗಿ ಕಿಡಿಕಾರಿದ್ದಾರೆ...

ಬೆಂಗಳೂರು: ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ರಾಜ್ಯ ಸರ್ಕಾರದ ವಿರುದ್ದ ಭಾನುವಾರ ತೀವ್ರವಾಗಿ ಕಿಡಿಕಾರಿದ್ದಾರೆ. 
ಪರಿವರ್ತನ ಯಾತ್ರೆ ರ್ಯಾಲಿಯನ್ನುದ್ದೇಶಿಸಿ ಮಾತನಾಡಿರುವ ಅವರು, ಗೌರಿ ಹಾಗೂ ಹಿಂದೂ ಕಾರ್ಯಕರ್ತರ ಹಂತಕರ ವಿರುದ್ಧ ಕ್ರಮ ಕೈಗೊಳ್ಳದಿರುವುದು ಹಾಗೂ ರಾಜ್ಯದಲ್ಲಿ ಅಪರಾಧ ಕೃತ್ಯಗಳು ಹೆಚ್ಚುತ್ತಿರುವುದರ ಕುರಿತಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಹಂತಕರನ್ನು ಬಂಧಿಸಿ ಕ್ರಮ ಕೈಗೊಳ್ಳುತ್ತೇವೆ. ಹಿಂದೂ ಕಾರ್ಯಕರ್ತರಾದ ರುದ್ರೇಶ್, ಕಟ್ಟಪ್ಪ ಮತ್ತು ಪರೇಶ್ ಮೆಸ್ತಾರನ್ನು ಹತ್ಯೆ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿದೆ. ರಾಜ್ಯ ಸರ್ಕಾರ ಏನು ಮಾಡುತ್ತಿದೆ? ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಸೂಕ್ತ ರೀತಿಯ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. 
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಿಭಜಿತ ಆಡಳಿತವನ್ನು ನಡೆಸುತ್ತಿದ್ದು, ರಾಜ್ಯದಲ್ಲಿ ಬೆಂಕಿ ಹೊತ್ತುಕೊಂಡರೆ ಅದರಿಂದ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದೆ. ಆದರೆ, ಬಿಜೆಪಿ ಆ ಬೆಂಕಿಯನ್ನು ಆರಿಸಲು ಯತ್ನಿಸುತ್ತದೆ. ಬಿಜೆಪಿ ಜಾತಿಗಳನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದೆ. ಮತ ಬ್ಯಾಂಕ್'ಗಾಗಿ ಮುಸ್ಲಿಂ ಸಮುದಾಯದ ಓಲೈಕೆಯಲ್ಲಿ ತೊಡಗಿರುವ ಕಾಂಗ್ರೆಸ್, ಸಂವಿಧಾನದಲ್ಲಿ ಅವಕಾಶ ಇಲ್ಲದಿದ್ದರೂ ಮೀಸಲಾತಿ ಕಲ್ಪಿಸುವ ಸುಳ್ಳು ಭರವಸೆ ನೀಡುತ್ತಿದೆ. ಈ ಮೂಲಕ ಜನರ ಕಣ್ಣಿಗೆ ಮಣ್ಣೆರಚುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದ್ದಾರೆ. 
ಇದೇ ವೇಳೆ ರಾಜ್ಯ ಟಿಪ್ಪು ಜಯಂತಿ ಕುರಿತಂತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಸರ್ಕಾರ ಸರ್ಕಾರ ಟಿಪ್ಪು ಜಯಂತಿ ಆಚರಿಸುವ ಮೂಲಕ ವಿವಾದವನ್ನು ಸೃಷ್ಟಿಸಿದೆ. ರಾಜಕೀಯ ಉದ್ದೇಶಕ್ಕಾಗಿ ಸಮಾಜ ಒಡೆಯುವ ಕೆಲಸವನ್ನು ಮಾಡಬಾರದು. ಕಿತ್ತೂರು ರಾಣಿ ಚೆನ್ಮಮ್ಮ, ನಾಡಪ್ರಭು ಕೆಂಪೇಗೌಡ, ಸರ್.ಎಂ.ವಿಶ್ವೇಶ್ವರಯ್ಯ ಮೊದಲಾದವರ ಜಯಂತಿ ಆಚರಣೆಗೆ ಅವಕಾಶವಿದೆ. ಆದರೆ, ಮತ ಬ್ಯಾಂಕ್ ಗಾಗಿ ವಿವಾದಿತ ವ್ಯಕ್ತಿಗಳ ಜಯಂತಿ ಆಚರಿಸುವ ಮುಖಾಂತರ ಜಾತಿಗಳ ಹಾಗೂ ಧರ್ಮಗಳ ನಡುವೆ ದ್ವೇಷ ಹರಡಬಾರದು ಎಂದು ತಿಳಿಸಿದ್ದಾರೆ. 
ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪವಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಹಾಡಹಗಲೇ ಅವ್ಯವಹಾರ ನಡೆಯುತ್ತಿದೆ. ಈ ಭ್ರಷ್ಟ ಕಳಂಕಿತ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕ ಹಕ್ಕಿಲ್ಲ. ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಿದ್ದೇ ಆದರೆ, ರಾಜ್ಯದಲ್ಲಿ ನಡೆಯುತ್ತಿರುವ ಗೂಂಡಾ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ತಪ್ಪಿತಸ್ಥರಿಗೆ ಜೈಲು ಶಿಕ್ಷೆ ವಿಧಿಸುತ್ತಾರೆಂಬ ಭರವಸೆಯನ್ನು ನೀಡುತ್ತೇನೆಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ