ಯೋಗೀಶ್ ಗೌಡ 
ರಾಜ್ಯ

ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರೆಯುತ್ತದೆ: ಯೋಗೀಶ್ ಗೌಡ ಕುಟುಂಬಸ್ಥರು

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಯೂಟರ್ನ್ ಹೊಡೆದಿದ್ದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಪತ್ನಿ ಮಲ್ಲಮ್ಮ ಅವರು ನ್ಯಾಯಕ್ಕಾಗಿ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಭಾನುವಾರ...

ಧಾರವಾಡ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಯೂಟರ್ನ್ ಹೊಡೆದಿದ್ದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಪತ್ನಿ ಮಲ್ಲಮ್ಮ ಅವರು ನ್ಯಾಯಕ್ಕಾಗಿ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಭಾನುವಾರ ಹೇಳಿದ್ದಾರೆ. 
2016ರ ಜೂನ್ ತಿಂಗಳಿನಲ್ಲಿ ಧಾರವಾಡದಲ್ಲಿ ದುಷ್ಕರ್ಮಿಗಳ ತಂಡವೊಂದು ಯೋಗೀಶ್ ಗೌಡ ಅವರನ್ನು ಬರ್ಬರವಾಗಿ ಹತ್ಯೆ ಮಾಡಿತ್ತು. ಬಳಿಕ ಯೋಗೀಶ್ ಗೌಡ ಅವರ ಪತ್ನಿ ಮಲ್ಲಮ್ಮ ಅವರು ಕಾಂಗ್ರೆಸ್ ವಿರುದ್ದ ತೀವ್ರವಾಗಿ ಕಿಡಿಕಾರಿದ್ದರು. ಪತಿ ಹತ್ಯೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸದಿದ್ದಕ್ಕೆ ತೀವ್ರವಾಗಿ ಅಸಮಾಧಾನವನ್ನು ಹೊರಹಾಕಿದ್ದರು. ಇದಲ್ಲದೆ. ಕೆಲ ದಿನಗಳ ಹಿಂದಷ್ಟೇ ಜಿಲ್ಲಾ ಸಚಿವ ವಿನಯ್ ಕುಲಕರ್ಣಿಯವರ ಮೇಲೂ ಆರೋಪ ಮಾಡಿದ್ದರು. 
ಪತಿ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರು ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿದ್ದರು. ಈ ಸಂಬಂಧ ಮಹಿಳಾ ಆಯೋಗದ ಮೊರೆ ಹೋಗಿದ್ದರು. ಶನಿವಾರಷ್ಟೇ ತನ್ನ ಕುಟುಂಬ ಸದಸ್ಯರ ವಿರುದ್ದ ದೂರು ದಾಖಲಿಸಿದ್ದರು. ಇದೀಗ ಮಲ್ಲಮ್ಮ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಯೋಗೀಶ್ ಗೌಡ ಅವರು ಕುಟುಂಬ ಸದಸ್ಯರೂ ಸೇರಿದಂತೆ ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿದೆ. 
ವಿನಯ್ ಕುಲಕರ್ಣಿ ಹಾಗೂ ಸರ್ಕಾರವನ್ನು ವಿರೋಧ ಮಾಡುತ್ತಿದ್ದ ಮಲ್ಲಮ್ಮ ಅವರು ಏಕಾಏಕಿ ಕಾಂಗ್ರೆಸ್ ಪಕ್ಷಕ್ಕೆ ಹೇಗೆ ಸೇರ್ಪಡೆಗೊಂಡರು ಎಂಬುದು ಈ ವರೆಗೂ ಸ್ಪಷ್ಟವಾಗಿಲ್ಲ. ಮಲ್ಲಮ್ಮ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿರುವುದಕ್ಕೆ ಬಿಜೆಪಿ ಸದಸ್ಯರೂ ಕೂಡ ಆಶ್ಚರ್ಯವನ್ನು ವ್ಯಕ್ತಪಡಿಸುತ್ತಿದ್ದಾರೆ. 
ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಧಾರವಾಡ ಸಂಸದ ಪ್ರಹ್ಲಾದ್ ಜೋಷಿಯವರು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದೆ. ಈ ಹಿಂದೆ ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳನ್ನು ನಾಶ ಪಡಿಸಲು ಕೆಲವರು ಯತ್ನ ನಡೆಸಿದ್ದರು. ಬಳಿಕ ಆರೋಪಿಗಳು ಕುಟುಂಬ ಸದಸ್ಯರೊಂದಿಗೆ ರಾಜಿ ಮಾಡಿಕೊಳ್ಳಲು ಯತ್ನಿಸಿದ್ದರು. ಇದೀಗ ದೂರುದಾರರನ್ನೇ ಹೈಜಾಕ್ ಮಾಡಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!

ಕಾವೇರಿ ನೀರು ಬಿಡುಗಡೆ ಸಮಿತಿಯ ಆದೇಶವು 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ

ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ, ಸರಳತೆಗೆ ಫ್ಯಾನ್ಸ್ ಫಿದಾ! Video

Beat the f**king sh*t out: ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ, ಟ್ರಂಪ್ ಆಕ್ರೋಶ!