ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಶಾಲಾ ಮುಖ್ಯ ಶಿಕ್ಷಕಿ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ, ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ರಾಮಕೃಷ್ಣಪ್ಪ ಎಂಬುವವರು ಖಾಸಗಿ ಶಾಲೆಗೆ ನುಗ್ಗಿ, ಮುಖ್ಯ ಶಿಕ್ಷಕಿಯ....

ಸಾಂದರ್ಭಿಕ ಚಿತ್ರ
Lingaraj Badiger
Updated On : 19 Dec 2017, 3:37 am
ಬೆಂಗಳೂರು: ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ರಾಮಕೃಷ್ಣಪ್ಪ ಎಂಬುವವರು ಖಾಸಗಿ ಶಾಲೆಗೆ ನುಗ್ಗಿ, ಮುಖ್ಯ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಬೆಂಗಳೂರಿನ ಸಿಂಗನಾಯಕನಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಬಿಜೆಪಿ ನಾಯಕನ ಗೂಂಡಾಗಿರಿ ಶಾಲಾ ಆವರಣದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಿಮ್ಮನಾಯಕನಹಳ್ಳಿ ನಿವಾಸಿಯಾಗಿರುವ ರಾಮಕೃಷ್ಣಪ್ಪ ಖಾಸಗಿ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ.
ಆಶಾ ಅವರು ರಾಮಕೃಷ್ಣಪ್ಪ ಬಳಿ 70 ಸಾವಿರ ರುಪಾಯಿ ಸಾಲ ಪಡೆದಿದ್ದು, ಸಾಲದ ಬಡ್ಡಿ ಹಣವನ್ನು ಪಡೆಯಲು ಶಾಲೆಗೆ ನುಗ್ಗಿದ ರಾಮಕೃಷ್ಣಪ್ಪ ಮಹಿಳೆ ಅಂತಾ ನೋಡದೇ ಕಪಾಳಮೋಕ್ಷ ಮಾಡಿದ್ದಾನೆ. ಈ ಎಲ್ಲ ದೃಶ್ಯಾವಳಿಗಳು ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಸಂಬಂಧ ಹಲ್ಲೆಗೊಳಗಾದ ಮುಖ್ಯ ಶಿಕ್ಷಕಿ ರಾಮಕೃಷ್ಣಪ್ಪ ವಿರುದ್ಧ ರಾಜನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement

Advertisement

ಮೂಲಗಳ ಪ್ರಕಾರ, ಘಟನೆಯ ನಂತರ ಆರೋಪಿ ರಾಮಕೃಷ್ಣಪ್ಪ ಅವರು ತಲೆಮರೆಸಿಕೊಂಡಿದ್ದು, ಪೊಲೀಸರು ರಾಮಕೃಷ್ಣಪ್ಪ ಪುತ್ರ ಜನಾರ್ದನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 
ರಾಮಕೃಷ್ಣಪ್ಪ ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಅವರ ಪರಮಾಪ್ತ ಎಂದು ಹೇಳಲಾಗಿದೆ. ಇನ್ನೂ ರಾಮಕೃಷ್ಣಪ್ಪ ಪತ್ನಿ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿದ್ದು, ರಾಜಕೀಯ ಪ್ರಭಾವದಿಂದಾಗಿ ಪೊಲೀಸರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments