ಬೆಂಗಳೂರು: ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಕಾರ್ಯಕ್ರಮವನ್ನು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಿದ್ದ ಸಂಘಟಕರು ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ. ನಿನ್ನೆ ಟೈಮ್ ಕ್ರಿಯೇಷನ್ಸ್ ಜಾಹಿರಾತು ಸಂಸ್ಥೆ ಕೋರ್ಟ್ ಮೊರೆ ಹೋಗಿ ಅರ್ಜಿ ಸಲ್ಲಿಸಿದೆ. ಸನ್ನಿ ನೈಟ್ ಇನ್ ಬೆಂಗಳೂರು ಕಾರ್ಯಕ್ರಮವನ್ನು ಟೈಮ್ ಕ್ರಿಯೇಷನ್ಸ್ ನಾಗವಾರದಲ್ಲಿ ವೈಟ್ ಆರ್ಕಿಡ್ ಕನ್ವೆನ್ಷನ್ ಕೇಂದ್ರದಲ್ಲಿ ಡಿಸೆಂಬರ್ 31ರಂದು ಆಯೋಜಿಸಿದೆ.
ಭದ್ರತಾ ಕಾರಣಗಳಿಗೆ ಕನ್ನಡಪರ ಸಂಘಟನೆಗಳ ವಿರೋಧದ ನಂತರ ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಟೈಮ್ಸ್ ಕ್ರಿಯೇಷನ್ ಸಂಸ್ಥೆ, ಕಾರ್ಯಕ್ರಮದ ಒಟ್ಟು ವೆಚ್ಚ 2.5 ಕೋಟಿ ರೂಪಾಯಿಗಳಾಗಿದ್ದು, ಕೊನೆ ಕ್ಷಣದಲ್ಲಿ ಕಾರ್ಯಕ್ರಮ ರದ್ದು ಮಾಡಿದರೆ ಭಾರೀ ನಷ್ಟವಾಗುತ್ತದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್.ಹರೀಶ್ ಅವರ ಪತ್ನಿ ಭವ್ಯ ಅರ್ಜಿ ಸಲ್ಲಿಸಿದ್ದಾರೆ.