ಕರ್ನಾಟಕ ಹೈಕೋರ್ಟ್ 
ರಾಜ್ಯ

ಬೆಂಗಳೂರು: ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವುಗೊಳಿಸಲು ಕೋರಿ ಹೈ ಕೋರ್ಟ್ ಗೆ ಅರ್ಜಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 23,000 ಅನಧಿಕೃತ ಫ್ಲೆಕ್ಸ್ ಗಳು/ ಬ್ಯಾನರ್ ಗಳು ಇವೆ.....

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 23,000 ಅನಧಿಕೃತ ಫ್ಲೆಕ್ಸ್ ಗಳು/ ಬ್ಯಾನರ್ ಗಳು ಇವೆ, ಅವುಗಳನ್ನು ತೆಗೆದುಹಾಕಬೇಕೆಂದು ಕೋರಿ ಸರಸ್ವತಿಪುರಂನ ನಿವಾಸಿಯೊಬ್ಬರು ಹೈ ಕೋರ್ಟ್ ಮೊರೆ ಹೋಗಿದ್ದಾರೆ.
ಅನಧಿಕೃತ ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ತೆಗೆದುಹಾಕಲು ಸಂಬಂಧಪಟ್ಟ ಅಧಿಕಾರಿಗಳು (ಬಿಬಿಎಂಪಿ ಅಥವಾ ಪೊಲೀಸರು) ಯಾವುದೇ ಕ್ರಮ ಕೈಗೊಳ್ಳಲಿಲ್ಲವೆಂದು ಸಾಮಾಜಿಕ ಕಾರ್ಯಕರ್ತ ಮೈಗೇಗೌಡ ತನ್ನ ಅರ್ಜಿಯಲ್ಲಿ ಆರೋಪಿಸಿದ್ದಾರೆ. ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಮತ್ತು ಬಿ. ವೀರಪ್ಪ ಅವರ ರಜಾ ಕಾಲದ ಪೀಠವು ನಗರಾಭಿವೃದ್ದಿ ಇಲಾಖೆ, ಬಿಬಿಎಂಪಿ ಕಮಿಷನರ್ ಮತ್ತು ಪೊಲೀಸ್ ಕಮಿಷನರ್ ಗಳಿಗೆ ಈ ಸಂಬಂಧ ನೋಟೀಸ್ ನೀಡಿದೆ.
ಹೂಡಿಕೆದಾರರಿಗೆ ಲಾಭವಾಗಲು ಜಾಹಿರಾತು ಮಾಫಿಯಾ ಕೆಲವೊಂದು ಗ್ಯಾಂಗ್ ಗಳಿಗೆ "ಸುಪಾರಿ" ನೀಡಿದ್ದು  ಇದಕ್ಕಾಗಿ ಅವರು ಮರಗಳಿಗೆ ಕೊಡಲಿ ಏಟು ಹಾಕುತ್ತಿದ್ದಾರೆ ಎಂದು ಅರ್ಜಿಯಲ್ಲಿ ಗಂಭೀರ ಆರೋಪಗಳನ್ನು ಮಾಡಲಾಗಿದೆ. ಬಿಬಿಎಂಪಿಯ ಅರಣ್ಯ ಸಂರಕ್ಷಣಾಧಿಕಾರಿ ಮಾತ್ರ ಈ ಗ್ಯಾಂಗ್ ನವರು ಮರಗಳನ್ನು ಕಡಿಯುವುದನ್ನು ತಡೆಯಲು ನಮಗೆ ಸಾದ್ಯವಾಗುತ್ತಿಲ್ಲ ಎಂದಿದ್ದಾರೆ. ಒಂದು ವೇಳೆ ಅಧಿಕಾರಿಗಳು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಉ ಮುಂದಾದಾರೆ ಸಹ ಅವರು ಹಣ ತೆತ್ತು ತಮ್ಮ ದಂಧೆ ಮುಂದುವರಿಸುತ್ತಾರೆ.
ಕರ್ನಾಟಕ ಓಪನ್ ಪ್ಲೇಸಸ್ (ವಿಕಾರ ನಿವಾರಣೆ) ಕಾಯಿದೆ, 1981 ರ ಅಡಿಯಲ್ಲಿ ನಿಯಮಗಳು ಮತ್ತು ನಿಬಂಧನೆಗಳನ್ನು ರೂಪಿಸದಿದ್ದರೆ, ಅನಧಿಕೃತ ಹೋರ್ಡಿಂಗ್ಸ್, ಫ್ಲೆಕ್ಸ್ ಪೋಸ್ಟರ್ ಗಳು, ಮತ್ತು ಬ್ಯಾನರ್ ಗಳು ಇತ್ಯಾದಿಗಳನ್ನು ಯಾರು ಮೇಲ್ವಿಚಾರಣೆ ಮಾಡುತ್ತಾರೆ ಎಂಬುದರ ಬಗ್ಗೆ ಸ್ಪಷ್ಟ ಉಲ್ಲೇಖವಿರುವುದಿಲ್ಲ. ಹೀಗಾಗಿ ಕಾಯ್ದೆ ಅಡಿಯಲ್ಲಿ ನಿಯಮಗಳನ್ನು ರಚಿಸಲು ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಅರ್ಜಿದಾರರು ನ್ಯಾಯಾಲಯಕ್ಕೆ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT