ಬೆಂಗಳೂರು: ಹೊಸ ವರ್ಷದ ಪ್ರಯುಕ್ತ ಡಿಸೆಂಬರ್ 31ರ ರಾತ್ರಿ ನಗರದ ಮಾನ್ಯತಾ ಟೆಕ್‌ಪಾರ್ಕ್ ನಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ‘ಸನ್ನಿ ನೈಟ್ಸ್’ ಕಾರ್ಯಕ್ರಮದಲ್ಲಿ ತಾವು ಪಾಲ್ಗೊಳ್ಳುವುದಿಲ್ಲ ಎಂದು ಸ್ವತಃ ನಟಿ ಸನ್ನಿ ಲಿಯೋನ್ ಮಂಗಳವಾರ ಟ್ವೀಟ್ ಮಾಡಿದ್ದಾರೆ.
"ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ನನಗೆ ಹಾಗೂ ನನ್ನ ಅಭಿಮಾನಿಗಳಿಗೆ ಸುರಕ್ಷತೆ ಒದಗಿಸಲು ಸಾಧ್ಯವಿಲ್ಲ ಎಂದು ಪೊಲೀಸರು ಬಹಿರಂಗವಾಗಿ ಹೇಳುತ್ತಿದ್ದಾರೆ. ಹೀಗಾಗಿ, ಜನರ ಸುರಕ್ಷತೆಯೇ ಮುಖ್ಯವೆಂದು ಪರಿಗಣಿಸಿ ನಾನು ಹಾಗೂ ನಮ್ಮ ತಂಡದವರು ಕಾರ್ಯಕ್ರಮದಿಂದ ಹಿಂದೆ ಸರಿದಿದ್ದೇವೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಸನ್ನಿ ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ತಮ್ಮ ವಿರುದ್ಧ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರಿಗೆ ಕವಿಮಾತೊಂದನ್ನು ಹೇಳಿರುವ ಸನ್ನಿ, ನಿಮ್ಮ ಕುರಿತು ಮಾತನಾಡಲು ಬೇರೆಯವರಿಗೆ ಅವಕಾಶ ನೀಡಬೇಡಿ. ನಿಮ್ಮ ಆಯ್ಕೆ ನಿಮ್ಮದೇ ಆಗಿರಲಿ. ಧ್ವನಿ ಎತ್ತಿ ಮತ್ತು ಸೂಕ್ತ ಆಯ್ಕೆ ಮಾಡಿ..ನವ ಭಾರತ ನಿರ್ಮಾಣ ಯುವಕರಿಂದ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.
ಸನ್ನಿಲಿಯೋನ್ ಬೆಂಗಳೂರು ಕಾರ್ಯಕ್ರಮ ರದ್ದಾದ ಕುರಿತಂತೆ ಅವರ ಅಭಿಮಾನಿಗಳು ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಒಂದು ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲಾಗದ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆ ಇಡೀ ರಾಜ್ಯದ ರಕ್ಷಣೆ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಇನ್ನು ಸನ್ನಿ ಲಿಯೋನ್ ರ ಈ ಟ್ವೀಟ್ ಗೆ 8.2 ಸಾವಿರ ಲೈಕ್ ಗಳು ಹಾಗೂ 1.4 ಸಾವಿರ ಬಾರಿ ರೀಟ್ವೀಟ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics