ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ ಅತ್ಯಾಚಾರ ಪ್ರಕರಣ: ಆರೋಪಿಗಳ ಬಂಧನಕ್ಕೆ ಪೋಷಕರ ಆಗ್ರಹ

ವಿಜಯಪುರದ ಅಪ್ರಾಪ್ತ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರಗತಿಯಲ್ಲಿ ಬಂಧನಕ್ಕೊಳಪಡಿಸುವಂತೆ ಪೋಷಕರು ಬುಧವಾರ ಆಗ್ರಹಿಸಿದ್ದಾರೆ...

ವಿಜಯಪುರ: ವಿಜಯಪುರದ ಅಪ್ರಾಪ್ತ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರಗತಿಯಲ್ಲಿ ಬಂಧನಕ್ಕೊಳಪಡಿಸುವಂತೆ ಪೋಷಕರು ಬುಧವಾರ ಆಗ್ರಹಿಸಿದ್ದಾರೆ. 
ವಿಜಯಪುರದ ದರ್ಗಾ ಬಡಾವಣೆಯ ಮಲ್ಲಿಕಾರ್ಜುನ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತೆಯನ್ನು ಮಧ್ಯಾಹ್ನ ಊಟದ ಬಿಡುವಿನ ವೇಳೆ ಒಬ್ಬಾತ ಕರೆದುಕೊಂಡು ಹೋಗಿದ್ದ. ಕೆಲ ಹೊತ್ತಿನ ಬಳಿಕ ಆಕೆ ಪ್ರಜ್ಞಾಹೀನಳಾಗಿ ಬಿದ್ದಿದ್ದಳು. ಅಲ್ಲೇ ಇದ್ದ ಜನ ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ವಾಹನದ್ಲಿ ಕರೆದುಕೊಂಡು ಹೋದರೂ ಮಾರ್ಗದ ಮಧ್ಯೆಯೇ ಆಕೆ ಅಸುನೀಗಿದ್ದಳು. 
ವಿಷಯ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಸಂಶಯದ ಮೇಲೆ ಇಬ್ಬರು ಯುವಕರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು. 
ಮಗಳ ಸಾವಿನಿಂದ ತೀವ್ರ ಕಂಗೆಟ್ಟಿದ್ದ ಪೋಷಕರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಿನ್ನೆ ಪ್ರತಿಭಟನೆ ನಡೆಸಿದ್ದರು. ತಡರಾತ್ರಿ ಬಾಲಕಿಯ ಶವವನ್ನು ನಗರದ ಅಂಬೇಡ್ಕರ್ ವೃತ್ತಕ್ಕೆ ತಂದು ಧರಣಿ ಆರಂಭಿಸಿದ್ದರು. ಆನೇಕ ಸಂಘಟನೆಗಳು ಧರಣಿಗೆ ಸಾಥ್ ನೀಡಿದ್ದವು. ಬಳಿಕ ಜಿಲ್ಲಾ ಸಚಿವ ಎಂ.ಬಿ. ಪಾಟೀಲ್ ಅವರು ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಬಾಲಕಿಯ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಯಿತು. 
ನಾನು ನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ನನಗೆ ನ್ಯಾಯಬೇಕು ಎಂದು ಬಾಲಕಿಯ ತಾಯಿ ಆಗ್ರಹಿಸಿದ್ದಾರೆ. 
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮತ್ತ ಅವರು ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಬಾಲಕಿಯ ಪೋಷಕರು ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!