ರಾಜ್ಯ

ಕಥನ ಭಾರತಿ ಸೇರಿ ಕನ್ನಡಕ್ಕೆ 2 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Srinivas Rao BV
ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ 2017ರ ಸಾಲಿನ ಪ್ರಶಸ್ತಿಯನ್ನು ಗುರುವಾರ ಪ್ರಕಟಿಸಲಾಗಿದ್ದು, ಕನ್ನಡದ ಒಂದು ಕೃತಿ ಹಾಗೂ ಮತ್ತೊಂದು ಅನುವಾದಿತ ಕೃತಿ ಆಯ್ಕೆಯಾಗಿವೆ.
2017ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಕನ್ನಡದ ಟಿ.ಪಿ. ಅಶೋಕ ಅವರ ಕಥನ ಭಾರತಿ ಕೃತಿ ಆಯ್ಕೆಯಾಗಿದೆ.
ಪ್ರಶಸ್ತಿಯು 1 ಲಕ್ಷ ನಗದು ಒಳಗೊಂಡಿದೆ. 2017ರ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿಯನ್ನೂ ಪ್ರಕಟಿಸಲಾಗಿದ್ದು, ಕನ್ನಡದ ಎಚ್.ಎಸ್‌. ಶ್ರೀಮತಿ  ಅವರು ಅನುವಾದಿಸಿದ ಮಹಾಶ್ವೇತಾದೇವಿ ಅವರ ಕಥಾ ಸಾಹಿತ್ಯ- 1 ಮತ್ತು 2 ಕೃತಿ ಆಯ್ಕೆಯಾಗಿವೆ. ಪ್ರಶಸ್ತಿ ₹ 50 ಸಾವಿರ ನಗದು ಒಳಗೊಂಡಿದೆ ಎಂದು ಅಕಾಡೆಮಿ ತಿಳಿಸಿದೆ.
ಮೈಸೂರು ವಿಶ್ವವಿದ್ಯಾನಿಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ ಪದವಿ ಪಡೆದಿರುವ ಕಥನ ಭಾರತಿ ಕೃತಿಯ ಕರ್ತೃ ಟಿ.ಪಿ ಅಶೋಕ, ಎರಡು ವರ್ಷಗಳ ಕಾಲ ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಈಗ ಸಾಗರದ ಲಾಲ್ ಬಹದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಪಕ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
SCROLL FOR NEXT