ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ
ಬೆಂಗಳೂರು: ವಿಜಯಪುರ ದಲಿತ ಯುವಂತಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಟ್ವೀಟ್ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಹೊನ್ನಾವರ ತಾಲೂಕಿನ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಜಿಹಾದಿಗಳು ಬಲಾತ್ಕಾರ ಮಾಡಿ ಕೊಲೆ ಮಾಡಲು ಯತ್ನಿಸಿದ್ದರು. ಸರ್ಕಾರ ಈ ಘಟನೆ ಕುರಿತು ಯಾಕೆ ಮೌನವಾಗಿದೆ? ಅತ್ಯಾಚಾರಕ್ಕೆ ಯತ್ನಿಸಿದ ಮತ್ತು ಗಾಯಗೊಳಿಸಿದ ವ್ಯಕ್ತಿಗಳನ್ನು ಯಾಕೆ ಬಂಧಿಸಿಲ್ಲ? ಮುಖ್ಯಮಂತ್ರಿಗಳೇ ಎಲ್ಲಿದ್ದೀರಿ?ಎಂದು ಟ್ವೀಟ್ ಮಾಡಿದ್ದರು.
ಕರಂದ್ಲಾಜೆಯವರು ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೊನ್ನಾವರ ಪಟ್ಟಣದ ಪೊಲೀಸರು ಶೋಭಾ ಅವರು ಶಾಂತಿ ಕದಡುವ ಉದ್ದೇಶದಿಂದ ಇಂತಹ ಟ್ವೀಟ್ ಮಾಡಿದ್ದಾರೆ. ಇದರಿಂದ ಪಟ್ಟಣದಲ್ಲಿ ಕೋಮು ಸೌಹಾರ್ದ ಹದಗೆಟ್ಟಿದೆ ಎಂದು ಉಲ್ಲೇಖಿಸಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ತಮ್ಮ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಮತ್ತೊಂದು ಟ್ವೀಟ್ ಮಾಡಿರುವ ಶೋಭಾ ಅವರು, ಮಹಿಳೆಯಲಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದ್ದು, ಇದೀಗ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವ ಮೂಲಕ ದನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರ ಜಿಹಾ0ದಿಗಳನ್ನು ರಕ್ಷಣೆ ಮಾಡುತ್ತಿದೆ ಎಂದು ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics