ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಮಹಾದಾಯಿ ವಿವಾದ: ಮಾತುಕತೆಗೆ ದಿನಾಂಕ ನಿಗದಿ ಮಾಡುವಂತೆ ಗೋವಾ ಸಿಎಂಗೆ ಸಿದ್ದರಾಮಯ್ಯ ಪತ್ರ

ರಾಜಕೀಯ ವಿಷಯವಾಗಿ ಮಾರ್ಪಾಟಾಗಿರುವ ಮಹಾದಾಯಿ ನದಿ ನೀರಿನ ವಿವಾದ ತಾರಕ್ಕೇರಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಪತ್ರವೊಂದನ್ನು ಬರೆದಿದ್ದು...

ಬೆಂಗಳೂರು: ರಾಜಕೀಯ ವಿಷಯವಾಗಿ ಮಾರ್ಪಾಟಾಗಿರುವ ಮಹಾದಾಯಿ ನದಿ ನೀರಿನ ವಿವಾದ ತಾರಕ್ಕೇರಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಪತ್ರವೊಂದನ್ನು ಬರೆದಿದ್ದು, ವಿವಾದ ಕುರಿತು ಶೀಘ್ರವೇ ಮಾತುಕತೆಗೆ ದಿನಾಂಕ ಹಾಗೂ ಸ್ಥಳ ನಿಗದಿ ಮಾಡುವಂತೆ ಕೋರಿದ್ದಾರೆ. 
ಶುಕ್ರವಾರ ಸಂಜೆ ಪರಿಕ್ಕರ್ ಅವರಿಗೆ 2 ಪುಟಗಳ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಹಿಂದೆ ನಾನು ಬರೆದಿದ್ದ ಪತ್ರಕ್ಕೆ ತಾವು ಈವರೆಗೂ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಿರಲಿಲ್ಲ. ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿ ಪತ್ರ ಬರೆದಿದ್ದೀರಿ. ಈ ಪತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಹಾದಾಯಿ ನ್ಯಾಯಾಧೀಕರಣದ ಸೂಚನೆ ಅನ್ವಯ ಆದಷ್ಟು ಬೇಗನೆ ಸಭೆ ನಡೆಸಲು ಮುಂದೆ ಬನ್ನಿ ಎಂದು ಮನವಿ ಮಾಡಿದ್ದಾರೆ. 
ಯಡಿಯೂರಪ್ಪ ಅವರಿಗೆ ಪರಿಕ್ಕರ್ ಅವರು ಪತ್ರ ಬರೆದು ಪ್ರತಿಕ್ರಿಯೆ ನೀಡಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು, ಒಂದೂವರೆ ವರ್ಷದಿಂದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಪತ್ರ ಬರೆಯುತ್ತಿದ್ದರೂ ಉತ್ತರ ಕೊಡುತ್ತಿರಲಿಲ್ಲ. ಆದರೆ, ಇದೀಗ ಮಾಜಿ ಸಿಎಂ ಯಡಿಯೂರಪ್ಪ ಅವರ ಪತ್ರಕ್ಕೆ ಉತ್ತರ ನೀಡಿರುವ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ. 
ಮಹದಾಯಿ ನದಿ ನೀರಿನ ವಿವಾದಕ್ಕೆ ಮಾತುಕತೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ತಮಗೆ ಗೋವಾ ಸಿಎಂ ಪತ್ರ ಬರೆಯಬೇಕಿತ್ತು. ಆದರೆ, ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಗೋವಾ ಮುಖ್ಯಮಂತ್ರಿ ನಡೆಯಿದಂ ಬೇಸರವಾದರೂ ಶುಕ್ರವಾರ ಅವರಿಗೆ ಮತ್ತೊಂದು ಪತ್ರ ಬರೆದು 3 ರಾಜ್ಯಗಳ ಸಿಎಂ ಸಭೆ ನಡೆಸಲು ಮನವಿ ಮಾಡಿದ್ದೇನೆ. ಮಧ್ಯಂತ್ರವಾಗಿ 7.56 ಟಿಎಂಸಿ ನೀರು ಪಡೆಯಲು ನಮಗೆ ಹಕ್ಕಿದೆ ಎಂದು ತಿಳಿಸಿದ್ದೇನೆಂದು ಹೇಳಿದ್ದಾರೆ. 
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಪರಿವರ್ತನಾ ಯಾತ್ರೆಯಲ್ಲಿ ಜನರ ಪ್ರಶ್ನೆಗೆ ಉತ್ತರಿಸುವುದು ಬಿಜೆಪಿಗೆ ಕಷ್ಟವಾಗುತ್ತಿದೆ. ಹೀಗಾಗಿ ಪರಿಕ್ಕರ್ ಅವರು ಇದೀಗ ಪತ್ರ ಬರೆದಿದ್ದಾರೆ. ಶಿಷ್ಟಾಚಾರದಂತೆ ಅವರು ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆಯಬೇಕಿತ್ತು. ಆದರೆ, ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಪತ್ರ ಬರೆದು ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ, ಆದರೂ ಮಾತುಕತೆಗೆ ನಾವು ಸಿದ್ಧರಿದ್ದೇವೆಂದು ತಿಳಿಸಿದ್ದಾರೆ. 
ಡಿ.27ರಂದು ಉತ್ತರ ಕರ್ನಾಟಕ ಬಂದ್
ಮಹದಾಯಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಇದೀಗ ಉತ್ತರ ಕರ್ನಾಟಕ ಭಾಗದ ಜನರ ಮೂಗಿಗೆ ತುಪ್ಪ ಸವರಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿರುವ ಕಳಸಾ-ಬಂಡೂರಿ ಹೋರಾಟ ಸಮಿತಿ ಇದನ್ನು ಖಂಡಿಸಿ ಡಿ.27 ರಂದು ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಿದೆ. 
ಬಂದ್ ಕರೆಗೆ ಕಳಸಾ-ಬಂಡೂರಿ, ಮಹದಾಯಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದು, ಈ ಹಿನ್ನಲೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೋರಾಟ ಸಮಿತಿ ಅಧ್ಯಕ್ಷ ರಾಜಣ್ಣ ಕೊರವಿಯವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್