ಪ್ರಿಯತಮೆ ವಿಷ ಕುಡಿದಳೆಂದು ಆಸ್ಪತ್ರೆಯಲ್ಲೇ ನೇಣಿಗೆ ಶರಣಾದ ಯುವಕ 
ರಾಜ್ಯ

ದಾವಣಗೆರೆ: ಪ್ರಿಯತಮೆ ವಿಷ ಕುಡಿದಳೆಂದು ಆಸ್ಪತ್ರೆಯಲ್ಲೇ ನೇಣಿಗೆ ಶರಣಾದ ಯುವಕ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಾವಣಗೆರೆ: ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ..
ಹೊನ್ನಾಳಿಯ ಕಮಲಾಪುರ ಗ್ರಾಮದ ಮಹೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು ಈತ ಅದೇ ಗ್ರಾಮದ ರಂಜಿತಾ ಎನ್ನುವ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ ಇವರಿಬ್ಬರ ಪ್ರೇಮದ ಕುರಿತು ಮನೆಯಲ್ಲಿ ವಿರೋಧವಿತ್ತು. 
ಆಗ ರಂಜಿತಾ ಮನೆಯವರು ಆಕೆಗೆ ಬೇರೆ ಮದುವೆ ಮಾಡಲು ಸಜ್ಜಾಗಿದ್ದರು. ಆದರೆ ಮಹೇಶ್ ಮಾತ್ರ ಅವಳನ್ನು ಬಿಟ್ಟಿರಲಾರದಾದ.  ಇಬ್ಬರೂ ಹಾವೇರಿ  ಜಿಲ್ಲೆ ರಾಣಿಬೆನ್ನೂರಿಗೆ ಪಲಾಯನಗೈದರು. ಅಲ್ಲಿ ಕೆಲ ಕಾಲ ಒಟ್ಟಿಗೇ ಇದ್ದ ಅವರ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ಆಗುತ್ತಿತ್ತು. ಆದರೆ ಎರಡು ದಿನಗಳ ಹಿಂದೆ ಜಗಳ ವಿಕೋಪಕ್ಕೆ ತಿರುಗಿ ರಂಜಿತಾ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಗ ಮಹೇಶ್ ಆಕೆಯನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದನು. 
ಇಂದು ಆಸ್ಪತ್ರೆಯಿಂದ ರಂಜಿತಾ ಡಿಸ್ಚಾರ್ಜ್ ಆಗುವವಳಿದ್ದು ಇನ್ನು ಆಕೆ ನನಗೆ ದೊರಕುವುದಿಲ್ಲ ಎಂದು ಖೇದಗೊಂಡ ಮಹೇಶ್ ಆತ್ಮಹತ್ಯೆ ಪ್ರಕರಣ ಸಹ ನನ್ನ ಮೇಲೆ ಬರಲಿದೆ ಎನ್ನುವ ಭೀತಿಯಲ್ಲಿ ಆಸ್ಪತ್ರೆ ಆವರಣದಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ದಾವಣಗೆರೆ ಪೋಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!