ರಾಜ್ಯ

ಕದ್ರಿ ಮಂಜುನಾಥ ದೇವಾಲಯದಲ್ಲಿ ಧ್ವನಿವರ್ಧಕ ಬಳಕೆ ಮಾಡದಂತೆ ಮನವಿ: ಹಿಂದೂ ಸಂಘಟನೆಗಳ ಆಕ್ರೋಶ

Srinivas Rao BV
ಮಂಗಳೂರು: ಮಂಗಳೂರಿನ ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥೇಶ್ವರ ದೇವಾಲಯದಲ್ಲಿ ಧ್ವನಿ ವರ್ಧಕಗಳನ್ನು ಸೀಮಿತವಾಗಿ ಬಳಕೆ ಮಾಡುವಂತೆ ಮಂಗಳೂರು ಮೇಯರ್ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ ಮನವಿ ಮಾಡಿರುವುದು ವಿವಾದಕ್ಕೀಡಾಗಿದೆ. 
ಕದ್ರಿ ದೇವಸ್ಥಾನದಲ್ಲಿ ವಿಶೇಷ ದಿನಗಳಲ್ಲಿ ಶ್ಲೋಕ ಮತ್ತು ಭಕ್ತಿಗೀತೆಗಳನ್ನು ಹಾಕುತ್ತಿರುವುದರಿಂದ ತೊಂದರೆಯುಂಟಾಗುತ್ತಿದೆ ಎಂದು ಸ್ಥಳೀಯ ನಿವಾಸಿ ಬ್ಲೇನಿ ಡಿಸೋಜಾ ಎಂಬುವವರು ಮಂಗಳೂರು ಮೇಯರ್ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ ಮನವಿ ಮಾಡಿದ್ದಾರೆ. 
ದೇವಸ್ಥಾನದ ಧ್ವನಿವರ್ಧಕದಿಂದ ಸ್ಥಳೀಯ ಫ್ಲ್ಯಾಟ್ ಗಳಲ್ಲಿ ನೆಲೆಸುವವರಿಗೆ ತೊಂದರೆಯಾಗುತ್ತಿದ್ದು, ದೇವಸ್ಥಾನದ ಒಳಭಾಗಕ್ಕೆ ಕೇಳಿಸುವಂತೆ ಮಾತ್ರ ಹಾಕಲು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯಿಂದ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಈ ಮನವಿಗೆ ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ಒಂಡು ವೇಳೆ ಧ್ವನಿವರ್ಧಕದಲ್ಲಿ ಹಾಕುವ ಭಕ್ತಿ ಗೀತೆಗಳನ್ನು ನಿಲ್ಲಿಸಿದರೆ ಉಗ್ರ ಹೋರಾಟ ಮಾಡುವುದಾಗಿ ಹಿಂದೂಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.
SCROLL FOR NEXT