ರಾಜ್ಯ

ಮಹದಾಯಿ ನೀರು ಹಂಚಿಕೆ: ಬೆಂಗಳೂರಿನ ಬಿಜೆಪಿ ಕಚೇರಿಯೆದುರು ಮುಂದುವರಿದ ರೈತರ ಪ್ರತಿಭಟನೆ

Sumana Upadhyaya
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಬಿಜೆಪಿ ಕಚೇರಿ ಎದುರು ರೈತರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನವಾದ ನಿನ್ನೆ ಕೂಡ ಮುಂದುವರಿಯಿತು. ಗದಗ, ಬಾಗಲಕೋಟೆ, ಹುಬ್ಬಳ್ಳಿ ಮತ್ತು ಇತರ ಭಾಗಗಳ ರೈತರು ಬೆಂಗಳೂರಿಗೆ ಆಗಮಿಸಿ ತಮ್ಮ ಭಾಗಗಳಿಗೆ ಮಹಾದಾಯಿ ನೀರು ಹರಿಸುವಂತೆ ಒತ್ತಾಯ ಮಾಡಿದರು. ಮೊನ್ನೆ ತಮ್ಮ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಆರಂಭಿಸಿದ ರೈತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಜೊತೆ ಸಮಸ್ಯೆಗಳ ಬಗ್ಗೆ ಚರ್ಚಿಸದಿದ್ದರೆ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದಾರೆ.
ಬಿಜೆಪಿಯ ರಾಜ್ಯ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿರುವ ಯಡಿಯೂರಪ್ಪ ನಾಳೆ ಬೆಂಗಳೂರಿಗೆ ಹಿಂತಿರುಗುವ ನಿರೀಕ್ಷೆಯಿದೆ. ಕರ್ನಾಟಕ ರೈತ ಸೇನೆ ಬ್ಯಾನರ್ ನಲ್ಲಿ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿರುವ ರೈತರು, ಕಳೆದೆರಡು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸುತ್ತಲೇ ಬಂದಿದ್ದೇವೆ. ಆದರೆ ಜನನಾಯಕರು ಕಿವುಡರಂತೆ ವರ್ತಿಸುತ್ತಿದ್ದಾರೆ. ನೀರಿಗಾಗಿ ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದರು.
SCROLL FOR NEXT