ರಾಜ್ಯ

ಬಿಜೆಪಿ ಕಚೇರಿ ಎದುರು ಮಹದಾಯಿ ಹೋರಾಟ: ರೈತ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Lingaraj Badiger
ಬೆಂಗಳೂರು: ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿಗೆ ಒತ್ತಾಯಿಸಿ ರೈತರು ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಎದುರು ಆಹೋರಾತ್ರಿ ಧರಣಿ ನಡೆಸುತ್ತಿದ್ದು, ಹೋರಾಟದಲ್ಲಿ ಭಾಗವಹಿಸಿದ್ದ ರೈತ ಹನುಮಂತಪ್ಪ ಅವರು ಸೋಮವಾರ ತೀವ್ರ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
ಆಹೋರಾತ್ರಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ರೈತ ಹನುಮಂತಪ್ಪ ಅವರು ಅಸ್ವಸ್ಥಗೊಂಡಿದ್ದು, ಅವರನ್ನು ಮಲ್ಲೇಶ್ವರಂನಲ್ಲಿರುವ ಕೆಸಿ ಜನಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪತ್ರದಲ್ಲಿ ದಿನಾಂಕ ನಿಗದಿಯಾಗದೇ ಇರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ರೈತ ಸೇನಾ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ರೈತರು ಕಳೆದೆರೆಡು ದಿನಗಳಿಂದ ಸ್ಥಳ ಬಿಟ್ಟು ಕದಲದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಹದಾಯಿ ಹೋರಾಟಗಾರ ಬಗ್ಗೆ ಹುಡುಗಾಟಿಕೆಯಿಂದ ಹಗುರವಾಗಿ ಮಾತನಾಡಬೇಡಿ. ನೀರು ಕೊಡಿಸಲು ಆಗುವುದೋ ಇಲ್ಲವೋ ಸ್ಪಷ್ಟಪಡಿಸಿ ಎಂದು ಬಿಜೆಪಿ ನಾಯಕರಿಗೆ ರೈತ ವಿರೇಶ್ ಸೊಬರದ ಮಠ ಒತ್ತಾಯಿಸಿದ್ದಾರೆ.
SCROLL FOR NEXT