ಸಾಂದರ್ಭಿಕ ಚಿತ್ರ 
ರಾಜ್ಯ

ಮಹದಾಯಿಗಾಗಿ ಉತ್ತರ ಕರ್ನಾಟಕ ಬಂದ್, ಹಲವು ಸಂಘಟನೆಗಳಿಂದ ಬೆಂಬಲ

ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸಬೇಕೆಂದು....

ಬೆಂಗಳೂರು: ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸಬೇಕೆಂದು ಒತ್ತಾಯಿಸಿ ಡಿಸೆಂಬರ್ 27ರಂದು ಉತ್ತರ ಕರ್ನಾಟಕ ಬಂದ್ ಗೆ ಕಳಸಾ ಬಂಡೂರಿ ಹೋರಾಟ ಸಮಿತಿ ಕರೆ ನೀಡಿದೆ.
ಮಹದಾಯಿ ವಿವಾದ ಇತ್ಯಾರ್ಥಗೊಳಿಸುವುದಾಗಿ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಈಗ ಮಾತು ತಪ್ಪಿದ್ದಾರೆ. ಅಲ್ಲದೇ ಬಿಜೆಪಿ, ಕಾಂಗ್ರೆಸ್ ಸರಿಯಾಗಿ ಸ್ಪಂದಿಸುತ್ತಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿಲುವು ಖಂಡಿಸಿ ನಾಳೆ ಉತ್ತರ ಕರ್ನಾಟಕ ಬಂದ್ ಕರೆ ನೀಡಿರುವುದಾಗಿ ಸಮಿತಿ ಹೇಳಿದೆ.
ಕಳಸಾ ಬಂಡೂರಿ ಹೋರಾಟ ಸಮಿತಿ ಬಂದ್ ಗೆ ಕನ್ನಡ ಚಿತ್ರೋದ್ಯಮ, ವಾಟಾಳ್ ನಾಗರಾಜ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಡಿಸೆಂಬರ್ 27ರ ಉತ್ತರ ಕರ್ನಾಟಕ ಬಂದ್ ವೇಳೆ ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಚರ್ಚಿಸುವುದಾಗಿ ತಿಳಿಸಿವೆ.
ಮಹದಾಯಿ ಅಚ್ಚುಕಟ್ಟು ಪ್ರದೇಶದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಂಪೂರ್ಣ ಬಂದ್ ಆಚರಣೆ ಮಾಡಲಾಗುತ್ತದೆ ಎಂದು ರೈತ ಮುಖಂಡರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ