ಕಲಬುರ್ಗಿ: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ಅವರ ನಾಲಿಗೆ ಕತ್ತರಿಸಿ ತಂದರೆ 1ಕೋಟಿ ರೂ. ನಗದು ಬಹುಮಾನ ನೀಡಲಾಗುವುದು' ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗುರುಶಾಂತ ಪಟ್ಟೇದಾರ ಹೇಳಿದರು.
ಇಂದು ಕಲಬುರ್ಗಿಯಲ್ಲಿ ನಡೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಪಟ್ಟೇದಾರ "ಸಚಿವರು ಜಾತ್ಯತೀತ ಪದಕ್ಕೆ ಚ್ಯುತಿ ತರುವ ಹೇಳಿಕೆ ನೀಡಿದ್ದಾರೆ. ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಕಿತ್ತು ಹಾಕಬೇಕು. ದೇಶದ ಎಲ್ಲ ಜನರು ಶಾಂತಿಯಿಂದ ಬದುಕುತ್ತಿದ್ದಾರೆ ಆದರೆ ಕೇಂದ್ರ ಮಂತ್ರಿಗಳಾದ ಅನಂತಕುಮಾರ್ ಹೆಗ್ಡೆ ತಮ್ಮ ಹೇಳಿಕೆಗಳ ಮೂಲಕ ತ್ಯಾತೀತರಿಗೆ ಅವಮಾನ ಮಾಡಿದ್ದಾರೆ. ಭಾರತೀಯ ಸಂವಿಧಾನವನ್ನು ವಿರೋಧಿಸುವವರು ದೇಶದ್ರೋಹಿಗಳೆನಿಸುತ್ತಾರೆ. ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಕಿತ್ತು ಹಾಕಬೇಕು" ಎಂದು ಒತ್ತಾಯಪಡಿಸಿದ್ದಾರೆ.
"ಜಾತ್ಯಾತೀತರಿಗೆ ಅಪ್ಪ ಅಮ್ಮ ಯಾರೆಂದೂ ಗೊತ್ತಿಲ್ಲ" ಎಂದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಆಳಂದ ಶಾಸಕ ಬಿ.ಆರ್. ಪಾಟೀಲ ಹೇಳಿದ್ದಾರೆ. ಈ ಸಂಬಂಧ ಕಾನೂನು ಸಲಹೆಗಾರರೊಡನೆ ಚರ್ಚೆ ನಡೆದಿದೆ. ಶೀಘ್ರದಲ್ಲಿ ಮೊಕದ್ದಮೆ ದಾಖಲಾಗಲಿದೆ ಎಂದು ಅವರು ಹೇಳಿದ್ದಾರೆ.
ಕೊಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು "ಪ್ಪ-ಅಮ್ಮ ಯಾರೆಂಬುದು ಗೊತ್ತಿಲ್ಲದವರು ಜಾತ್ಯಾತೀತರು" ಎಂದು ಹೇಳಿಕೆಯನ್ನು ನಿಡಿದ್ದು ಇದು ತೀವ್ರ ವಿವಾದವನ್ನು ಹುಟ್ಟುಹಾಕಿತ್ತು.