ಸಾಂದರ್ಭಿಕ ಚಿತ್ರ 
ರಾಜ್ಯ

ಕ್ಯಾಂಡಲ್ ನಿಂದಾಗಿ ಬೆಂಕಿ ಅವಘಡ; ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಸಾವು

ಕ್ಯಾಂಡಲ್ ನಿಂದಾಗಿ ಹೊತ್ತಿದ ಬೆಂಕಿ ಬಳಿಕ ಇಡೀ ಮನೆಗೆ ವ್ಯಾಪಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಬೆಂಗಳೂರು: ಕ್ಯಾಂಡಲ್ ನಿಂದಾಗಿ ಹೊತ್ತಿದ ಬೆಂಕಿ ಬಳಿಕ ಇಡೀ ಮನೆಗೆ ವ್ಯಾಪಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಮೂಲಗಳ ಪ್ರಕಾರ ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿಯ ಮಹದೇವಪುರದ ಉದಯನಗರದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಮನೆ ಮಾಲೀಕ 35 ವರ್ಷದ ಮುರುಗನ್, ಆಕೆಯ ಪತ್ನಿ ಸೋಫಿಯಾ (30 ವರ್ಷ) ಇವರಿಬ್ಬರ  ಮಗಳಾದ 6 ವರ್ಷದ ಫ್ಲೋರಾ ಎಂದು ಗುರುತಿಸಲಾಗಿದೆ. ಸ್ಥಳೀಯರು ನೀಡಿರುವ ಮಾಹಿತಿಯಂತೆ ಇಂದು ಬೆಳಗ್ಗೆ ಮನೆಯಿಂದ ಬರುತ್ತಿದ್ದ ಹೊಗೆಯನ್ನು ಗಮನಿಸಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.
ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಗೆ ಮುಂದಾದರು. ಆದರೆ ದುರಾದೃಷ್ಟವಶಾತ್ ಬೆಂಕಿ ನಂದಿಸಿ ಒಳಗಿದ್ದವನ್ನು ರಕ್ಷಿಸುವ ಹೊತ್ತಿಗೆ ಮೂವರೂ ಸಾವನ್ನಪ್ಪಿದ್ದರು.  ಪ್ರಸ್ತುತ ಮೂರೂ ಶವಗಳನ್ನು ಬೌರಿಂಗ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. 
ಪ್ರಕರಣ ದಾಖಲಿಸಿಕೊಂಡಿರುವ ಮಹದೇವಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದು, ಅಗ್ನಿ ಅವಘಡಕ್ಕೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT