ಸಂಗ್ರಹ ಚಿತ್ರ 
ರಾಜ್ಯ

ಮಹದಾಯಿಗಾಗಿ ಉತ್ತರ ಕರ್ನಾಟಕ ಬಂದ್; ಬಸ್ ಸಂಚಾರ ಸಂಪೂರ್ಣ ಸ್ಥಗಿತ

ಉತ್ತರ ಕರ್ನಾಟಕದ ಭಾಗದ ದಶಕಗಳ ಬೇಡಿಕೆ ಕುಡಿಯುವ ಸಲುವಾಗಿ ಮಹದಾಯಿ ನೀರು ಹಂಚಿಕೆ ವಿವಾದ ಸಂಬಂಧ ರೈತರು ಕರೆ ನೀಡಿರುವ ಉತ್ತರ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು,...

ಬೆಳಗಾವಿ: ಉತ್ತರ ಕರ್ನಾಟಕದ ಭಾಗದ ದಶಕಗಳ ಬೇಡಿಕೆ ಕುಡಿಯುವ ಸಲುವಾಗಿ ಮಹದಾಯಿ ನೀರು ಹಂಚಿಕೆ ವಿವಾದ ಸಂಬಂಧ ರೈತರು ಕರೆ ನೀಡಿರುವ ಉತ್ತರ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು,  ಉತ್ತರ ಕರ್ನಾಟಕ ಭಾಗದಲ್ಲಿ ಬಸ್ ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಮಹದಾಯಿ ವಿವಾದದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸ ಬೇಕು ಎಂದು ಆಗ್ರಹಿಸಿ ಕಳಸಾ – ಬಂಡೂರಿ ಹೋರಾಟಗಾರರು ನಡೆಸುತ್ತೀರುವ ಉತ್ತರ ಕರ್ನಾಟಕ ಬಂದ್ ಬೆಳಗ್ಗೆಯಿಂದಲೇ ತೀವ್ರ ಸ್ವರೂಪ  ಪಡೆದುಕೊಂಡಿದ್ದು, ನೂರಾರು ಪ್ರತಿಭಟನಾಕಾರರು ಬೆಳಗ್ಗೆಯಿಂದಲೇ ರಸ್ತೆಗಿಳಿದು ಕೇಂದ್ರ, ಗೋವಾ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಪ್ರಮುಖವಾಗಿ ಬೆಳಗಾವಿ, ನವಲಗುಂದ,  ಹುಬ್ಬಳ್ಳಿ, ನರಗುಂದ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಒಟ್ಟು ಏಳು ಜಿಲ್ಲೆಗಳಲ್ಲಿ ಬಂದ್ ಆಚರಣೆ ಮಾಡಲಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಈ ಏಳು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕರ್ನಾಟಕ ವಿವಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವ ವಿದ್ಯಾಲಯ  ಸ್ನಾತಕೋತ್ತರ 3ನೇ ಸೆಮೆಸ್ಟರ್​ ಪರೀಕ್ಷೆ ಮುಂದೂಡಲಾಗಿದೆ. ಡಿ.27ರಂದು ನಡೆಯಿಬೇಕಿದ್ದ ಪರೀಕ್ಷೆಯನ್ನು ಜ.7ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ. 
ಧಾರವಾಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಇನ್ನು ಧಾರವಾಡದಲ್ಲಿ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ ಮಾಡಲಾಗಿದ್ದು, ಮುಂಜಾಗೃತ ಕ್ರಮವಾಗಿ 1000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಎರಡು ಕೆಎಸ್ ಆರ್ ಪಿ ತುಕಡಿ, 12 ಜಿಲ್ಲಾ ಸಶಸ್ತ್ರ  ಮೀಸಲು ಪಡೆ, 200 ಗೃಹ ರಕ್ಷಕದಳ ಸಿಬ್ಬಂದಿ, ಎಸ್​ಪಿ, 3 ಡಿವೈಎಸ್​ ಪಿ, 12 ಸಿಪಿಐ, 15 ಪಿಎಸ್ಐ ಸೇರಿ 500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ನವಲಗುಂದ ಪಟ್ಟಣದಲ್ಲಿ ಹೆಚ್ಚನ ಭದ್ರತೆ ನೀಡಲಾಗಿದೆ.  ಅಂತೆಯೇ ಹುಬ್ಬಳ್ಳಿಯಲ್ಲಿಯೂ ಬಂದ್​ ಗೆ ಬೆಂಬಲ ವ್ಯಕ್ತವಾಗಿದ್ದು, ಪ್ರತಿಭಟನಾಕಾರರು ಚೆನ್ನಮ್ಮ ವೃತ್ತದಲ್ಲಿ ಟೈರ್ ​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಎಸ್ ​ಆರ್​ ಟಿಸಿ, ಖಾಸಗಿ ಬಸ್ ​ಗಳ ಸೇವೆ ಸ್ಥಗಿತಗೊಂಡಿದ್ದು, ಬಸ್​  ನಿಲ್ದಾಣ ಬಿಕೋ ಎನ್ನುತ್ತಿವೆ.
ಗದಗದಲ್ಲೂ ಬಂದ್ ಬಿಸಿ ಮುಟ್ಟಿದ್ದು,  ಜಿಲ್ಲೆಯಾದ್ಯಂತ ಪ್ರತಿಭಟನೆಯ ಕಾವು ಜೋರಾಗಿದೆ. ಪ್ರತಿಭಟನಾಕಾರರು ಹುಬ್ಬಳ್ಳಿ – ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನ ತಡೆದು ಹಿಂದಕ್ಕೆ ಕಳುಹಿಸುತ್ತಿದ್ದಾರೆ. ಜಿಲ್ಲೆಯ  ಗಜೇಂದ್ರಗಡದಲ್ಲೂ ಬೀದಿಗಿಳಿದಿರುವ ಕನ್ನಡಪರ ಸಂಘಟನೆಗಳು ಕಾಲಕಾಲೇಶ್ವರ ವೃತ್ತದಲ್ಲಿ ಟೈರ್​ ಗೆ ಬೆಂಕಿ ಹಚ್ಚಿದ್ದಾರೆ. ನರಗುಂದ, ರೋಣ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮನೋಜ್ ಜೈನ್  ಸ್ಪಷ್ಟನೆ ನೀಡಿದ್ದಾರೆ. ನರಗುಂದನಲ್ಲಿ ಬಿಗಿ ಭದ್ರತೆ ನೀಡಲಾಗಿದೆ.
ಇನ್ನು ಬಾಗಲಕೋಟೆಯಲ್ಲಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬಸವೇಶ್ವರ ವೃತ್ತದಲ್ಲಿ ಟೈರ್ ​ಗೆ ಬೆಂಕಿ ಹಚ್ಚಿದ್ದಾರೆ. ಹುನಗುಂದದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT