ಸಾಂದರ್ಭಿಕ ಚಿತ್ರ 
ರಾಜ್ಯ

ಮಹದಾಯಿ ವಿವಾದ: ಬಿಜೆಪಿ ಕಾರ್ಯಕರ್ತರಿಂದ ಹುಬ್ಬಳ್ಳಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ

ಮಹದಾಯಿ ವಿವಾದಕ್ಕೆ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಹುಬ್ಬಳ್ಳಿಯ....

ಹುಬ್ಬಳ್ಳಿ: ಮಹದಾಯಿ ವಿವಾದಕ್ಕೆ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸುಮಾರು 75 ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.
ಇಂದು ಬೆಳಗ್ಗೆ ಸಿದ್ಧಾರೂಢ ಮಠದಿಂದ ಕಾಂಗ್ರೆಸ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಲ್ಲದೆ ಕೆಲಕಾಲ ಕಾಂಗ್ರೆಸ್ ಕಚೇರಿ ಎದುರು ಧರಣಿ ಸಹ ನಡೆಸಿದರು.
ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕ ಮಹೇಶ್ ತೆಂಗಿನಕಾಯಿ ಅವರು, ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!