ಬಾಗಲಕೋಟೆ: ಬಳ್ಳಾರಿಯಿಂದ ನಿಶ್ಚಿತಾರ್ಥ ಮುಗಿಸಿಕೊಂಡು ವಾಪಸಾಗುತ್ತಿದ್ದ ವೇಳೆ ಹುನಗುಂದದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು ಮೂವರ ಸ್ಥಿತಿ ಗಂಭೀರವಾಗಿದೆ.
ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಪಂಕಜ್ ಸಿಂಗಿ(48), ಉಮಾಬಾಯಿ ಸಿಂಗಿ(48), ಪುಷ್ಪಾಬಾಯಿ ಧರಕ್(62) ಹಾಗೂ ಶ್ರೀಕಾಂತಾ ಬಾಯಿ ಧರಕ್(65) ಎಂದು ತಿಳಿದುಬಂದಿದೆ.
ಇನ್ನು ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡಿರುವ ದೀಪಕ್, ಸುನೀಲ್ ಮತ್ತು ಶ್ರೀಧರ್ ಎನ್ನುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.