ಮಂಗಳೂರು: ಜಿಲ್ಲೆಯಲ್ಲಿ ಪದೆ ಪದೇ ಕೋಮು ಗಲಭೆಗಳಿಗೆ ಸೃಷ್ಟಿಸುತ್ತಿರುವ ಆರೋಪದ ಮೇಲೆ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡ ಖಲೀಲ್ ಅವರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಪಟ್ಟಣದ ನಿವಾಸಿಗಳಾದ ಈ ಇಬ್ಬರೂ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದಾರೆ.
ಕಳೆದ ಜೂನ್ ತಿಂಗಳಲ್ಲಿ ಪರಸ್ಪರ ಹಲ್ಲೆ ಮಾಡಿಕೊಂಡು ಮತೀಯ ಗಲಭೆಗೆ ಕಾರಣರಾಗಿದ್ದರು ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಸಿ.ಎಚ್.ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಇಬ್ಬರನ್ನೂ ಗಡಿಪಾರು ಮಾಡಿ ಆದೇಶ ಹೊರಡಿಸುವಂತೆ ಎರಡು ತಿಂಗಳ ಹಿಂದೆ ಅರ್ಜಿ ಸಲ್ಲಿಸಲಾಗಿತ್ತು. ಹಲವು ಬಾರಿ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಯವರು, ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಅದರಂತೆ ಇಬ್ಬರನ್ನೂ ಜಿಲ್ಲೆಯಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics