ನಗರಕ್ಕೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ 
ರಾಜ್ಯ

ನಗರಕ್ಕೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್: ಬಡ್ತಿ ಮೀಸಲಾತಿ ವಿಧೇಯಕಕ್ಕೆ ಅಂಕಿತ ಹಾಕಲು ಸಿಎಂ ಮನವಿ

2 ದಿನಗಳ ಭೇಟಿಗಾಗಿ ನಗರಕ್ಕೆ ಆಗಮಿಸಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು...

ಬೆಂಗಳೂರು: 2 ದಿನಗಳ ಭೇಟಿಗಾಗಿ ನಗರಕ್ಕೆ ಆಗಮಿಸಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. 
ಸುಪ್ರೀಂಕೋರ್ಟ್ ಆದೇಶದ ಹಿನ್ನಲೆಯಲ್ಲಿ ರಾಜ್ಯದ ಸಾವಿರಾರು ಪರಿಶಿಷ್ಟ ಜಾತಿ ಹಾಗೂ ಜನಾಂಗದ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ಕಡಿತ ಆಗುವುದನ್ನು ತಪ್ಪಿಸಲು ವಿಧಾನಮಂಡಲ ಅಂಗೀಕರಿಸಿರುವ ಬಡ್ತಿ ಮೀಸಲಾತಿ ಸಂರಕ್ಷಣೆ ವಿಧೇಯಕ್ಕೆ ಅಂತಿಕ ಹಾಕುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬಳಿ ಮನವಿ ಮಾಡಿದರು.
ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿರುವ ಪ್ರಕಾರ, ಬಡ್ತಿ ಮೀಸಲಾತಿ ವಿಧೇಯಕಕ್ಕೆ ಅಂಕಿತ ಹಾಕಲು ಕೋವಿಂದ್ ಅವರು ಧನಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ. 
ನಿನ್ನೆ ಸಂಜೆ ನಗರಕ್ಕೆ ಆಗಮಿಸಿದ ಕೋವಿಂದ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜಭವನದಲ್ಲಿ ಚರ್ಚೆ ನಡೆಸಿದರು. ಈ ವೇಳೆ ವಿಧೇಯಕದ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದರು. ಇದಕ್ಕೂ ಮೊದಲು ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೋವಿಂದ್ ಅವರನ್ನು ರಾಜ್ಯಪಾಲ ವಜುಭಾಯಿವಾಲಾ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ