ಬೆಂಗಳೂರು: ಖಾಸಗಿ ಹಾಗೂ ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿಯೂ ಕನ್ನಡಿಗರಿಗೆ ಆದ್ಯತೆ ನೀಡುವ ಅವಶ್ಯಕತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲು ನೀತಿಯನ್ನು ಅನುಷ್ಠಾನಗೊಳಿಸಲು ಸಚಿವ ಸಂಪುಟ ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಖಾಸಗಿ ಕ್ಷೇತ್ರಗಳಲ್ಲಿ ಉದ್ಯೋಗವಕಾಶ ಹೆಚ್ಚುತ್ತಿರುವುದರಿಂದ ಸದ್ಯ ಇರುವ ಮೀಸಲಾತಿ ವ್ಯವಸ್ಥೆ ಮಹತ್ವ ಕಳೆದುಕೊಳ್ಳುತ್ತಿದೆ. ಕೈಗಾರಿಕೆಗಳ ಬೆಳವಣಿಗೆ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ ಮೀಸಲಾತಿ ನಿಗದಿ ಪಡಿಸಬೇಕಾದ ಅವಶ್ಯಕತೆ ಇದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳಲ್ಲೂ ಕನ್ನಡಿಗರಿಗೆ ಆದ್ಯತೆ ಸಿಗಬೇಕು ಇದನ್ನು ಯಾರಿಂದಲೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟ ಪಡಿಸಿದರು.