ಬಂಧಿತ ಆರೋಪಿಗಳು 
ರಾಜ್ಯ

ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣ: ಬಚ್ಚನ್ ಸೇರಿ 7 ಆರೋಪಿಗಳು 14 ದಿನ ಪೊಲೀಸ್ ಕಸ್ಟಡಿಗೆ

ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧಿಸಲ್ಪಟ್ಟಿರುವ ಆರೋಪಿಗಳನ್ನು ಪೊಲೀಸರು ...

ಬೆಂಗಳೂರು: ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧಿಸಲ್ಪಟ್ಟಿರುವ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಸಿಟಿ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಿದ್ದು ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಡಿಸಿಪಿ ಹರ್ಷ ನೇತೃತ್ವದಲ್ಲಿ ಮುಂದಿನ ವಿಚಾರಣೆ ನಡೆಯಲಿದೆ.

ಶೂಟೌಟ್ ಪ್ರಕರಣ ಸಂಬಂಧ ನಿನ್ನೆ ಲೇಖಕ ಅಗ್ನಿ ಶ್ರೀಧರ್ ಮನೆ ಮೇಲೆ ದಾಳಿ ನಡೆಸಿದ್ದ ಪೊಲೀಸರು ಸೈಯ್ಯದ್ ಅಮಾನ್ ಬಚ್ಚನ್, ರೋಹಿತ್ ತನ್ವೀರ್, ಅರುಣ್ ಕುಮಾರ್, ವರುಣ್ ಕುಮಾರ್, ಬ್ರಿಜ್ ಭೂಷಣ್, ರಾಮ್ ಕುಮಾರ್ ರಾಯ್, ಮತ್ತು ಸಬೀರ್ ಎಂಬುವರನ್ನು ಬಂಧಿಸಿದ್ದಾರೆ.

ಫೆಬ್ರವರಿ 2 ರಂದು ಕಡಬರೆಗೆ ಶ್ರೀನಿವಾಸನ ಸಹಚರ ಟಾಟಾ ರಮೇಶ್ ಎಂಬಾತ ಯಲಹಂಕ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಅಗ್ನಿ ಶ್ರೀಧರ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

ಆರೋಪಿಗಳಿಗೆ ಆಶ್ರಯ ನೀಡಿದ್ದ ಅನುಮಾನದ ಮೇಲೆ ಪತ್ರಕರ್ತ ಅಗ್ನಿ ಶ್ರೀಧರ್ ಹಾಗೂ ಅವರ ಸಹಚರ ಸೈಯದ್ ಅಮಾನ್ ಅಲಿಯಾಸ್ ಬಚ್ಚನ್ ಅವರ ಮನೆಗಳ  ಮೇಲೆ ಮಂಗಳವಾರ ದಾಳಿ ನಡೆಸಿದ ನಗರ ಪೂರ್ವ ವಿಭಾಗದ ಪೊಲೀಸರು, ನಾಲ್ಕು ರಿವಾಲ್ವರ್‌ಗಳು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿದರು.

ಶ್ರೀನಿವಾಸ್ ಮೇಲಿನ ಶೂಟೌಟ್ ಪ್ರಕರಣ ಸಂಬಂಧ ಪೊಲೀಸರು ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಆಪ್ತ ಸತೀಶ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ರೋಹಿತ್ ಅಲಿಯಾಸ್ ಒಂಟೆ ರೋಹಿತ್ ಹಾಗೂ ಸುನೀಲ್ ಅಲಿಯಾಸ್ ಸೈಲೆಂಟ್ ಸುನೀಲ್ ಅವರ ಮಾತಿನಂತೆ ಬೆದರಿಕೆ ಹಾಕಿದ್ದೆ. ಅವರಿಬ್ಬರೂ ಈಗ ಶ್ರೀಧರ್ ಮತ್ತು ಬಚ್ಚನ್ ಅವರ ಮನೆಯಲ್ಲಿದ್ದಾರೆ ಎಂದು  ಆತ ವಿಚಾರಣೆ ವೇಳೆ ಹೇಳಿಕೆ ಕೊಟ್ಟಿದ್ದ.
 
ಇನ್ನೂ ದಾಳಿ ವೇಳೆ ಎದೆ ನೋವು ಎಂದು ಕುಸಿದು ಬಿದ್ದ ಶ್ರೀಧರ್ ಅವರನ್ನು ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೇತರಿಸಿಕೊಂಡ ಬಳಿಕ ವಿಚಾರಣೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಅಗ್ನಿ ಶ್ರೀಧರ್ ನನ್ನು ನೋಡಲು ಬಂದ ರೋಹಿತ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಅಗ್ನಿ ಶ್ರೀಧರ್ ಮನೆ ಮೇಲೆ ದಾಳಿ ನಡೆಸಿದ ವೇಳೆ ನಾಲ್ಕು ರಿವಾಲ್ವರ್, ಜೀವಂತ ಗುಂಡುಗಳು, ಎರಡು ಲಾಂಗು,  ಐದು ಚಾಕು, ನಾಲ್ಕು ಬೇಸ್‌ಬಾಲ್‌ ಬ್ಯಾಟ್‌ಗಳು, ಎರಡು ಕತ್ತಿಗಳು, ರು.6.88 ಲಕ್ಷ ನಗದು, 418 ಗ್ರಾಂ ಚಿನ್ನಾಭರಣ ಹಾಗೂ ಗಾಂಜಾ ಜಪ್ತಿ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ