ರಾಜ್ಯ

ಬಯೋಕಾನ್-ಆರೋಗ್ಯ ಇಲಾಖೆ ಸಹಯೋಗದಲ್ಲಿ ಬೆಂಗಳೂರಿನಲ್ಲಿ 15 ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ

Shilpa D

ಬೆಂಗಳೂರು: ಬಯೋಕಾನ್ ಸಂಸ್ಥೆ ರಾಜ್ಯ ಆರೋಗ್ಯ ಇಲಾಖೆ ಸಹಯೋಗದಲ್ಲಿ ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸುವ ಒಪ್ಪಂದಕ್ಕೆ ಸಹಿ ಮಾಡಲಾಗಿದೆ.

ಮಾರತ್ ಹಳ್ಳಿಯಲ್ಲಿ ಮೊದಲ ಸ್ಮಾರ್ಟ್ ಕ್ಲಿನಿಕ್ ಹಾಗೂ ನಾಗರಬಾವಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉದ್ಘಾಟನೆ ಮಾಡಿ ಮಾತನಾಡಿದ ಆರೋಗ್ಯ ಸಚಿವ ರಮೇಶ್ ಕುಮಾರ್, ಹಿಂದುಳಿದ ಗ್ರಾಮಗಳಲ್ಲಿ  ಉತ್ತಮ ಆರೋಗ್ಯ ಸೇವೆ ಒದಗಿಸಲು ತಂತ್ರಜ್ಞಾನ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಪ್ರಸಕ್ತ ಇರುವ ಸಾರ್ವಜನಿಕ ಆರೋಗ್ಯ ಸೇವೆಗಳ ಸಾಮರ್ಥ್ಯ ಹೆಚ್ಚಿಸುವುದು ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ಈ ಆರೋಗ್ಯ ಸೇವೆಗಳ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂಮ್ದಾರ್ ಹೇಳಿದ್ದಾರೆ.ಇನ್ನೂ ಬಯೋಕಾನ್ ಕಂಪನಿ 30 ಕ್ಕೂ ಹೆಚ್ಚು ಟೆಕ್ನಿಷಿಯನ್ ಗಳಿಗೆ ಉದ್ಯೋಗ ನೀಡಲಿದೆ.

SCROLL FOR NEXT