ಶಾಸಕ ಎಸ್ ಆರ್ ವಿಶ್ವನಾಥ್ 
ರಾಜ್ಯ

ಶೂಟೌಟ್ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಶಾಸಕ ಎಸ್ ಆರ್ ವಿಶ್ವನಾಥ್

ರೌಡಿ ಶೀಟರ್ ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣಕ್ಕೂ ತಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಯಲಹಂಕ ಶಾಸಕ ಎಸ್ ಎರ್ ವಿಶ್ವನಾಥ್ ಹೇಳಿದ್ದಾರೆ.

ಬೆಂಗಳೂರು: ರೌಡಿ ಶೀಟರ್ ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣಕ್ಕೂ ತಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಯಲಹಂಕ ಶಾಸಕ ಎಸ್ ಎರ್ ವಿಶ್ವನಾಥ್ ಹೇಳಿದ್ದಾರೆ.

ರೌಡಿ ಶೀಟರ್ ಕಡಬಗೆರೆ ಶ್ರೀನಿವಾಸ್ ಹತ್ಯೆ ಪ್ರಕರಣದಲ್ಲಿ ಪತ್ರಕರ್ತ ಮತ್ತು ಲೇಖಕ ಅಗ್ನಿ ಶ್ರೀಧರ್, ಬಚ್ಚನ್, ಸೈಲೆಂಟ್ ಸುನೀಲ ಹಾಗೂ ರೋಹಿತ್ ತನ್ವೀರ್, ಅರುಣ್ ಕುಮಾರ್, ವರುಣ್ ಕುಮಾರ್, ಬ್ರಿಜ್ ಭೂಷಣ್, ರಾಮ್  ಕುಮಾರ್ ರಾಯ್, ಮತ್ತು ಸಬೀರ್ ಎಂಬುವವರ ಜೊತೆ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹೆಸರೂ ಕೂಡ ತಳುಕು ಹಾಕಿಕೊಂಡಿತ್ತು. ಈ ಹಿನ್ನಲೆಯಲ್ಲಿ ಇಂದು ಗೃಹ ಸಚಿವ ಪರಮೇಶ್ವರ ಅವರನ್ನು ಭೇಟಿ ಮಾಡಿದ ಶಾಸಕ  ವಿಶ್ವನಾಥ್ ಅವರು, ಪ್ರಕರಣದಲ್ಲಿ ತಮ್ಮದೇನೂ ಪಾತ್ರವಿಲ್ಲ ವಿನಾಕಾರಣ ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಿಕೊಂಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ವಿಧಾನಸೌಧದಲ್ಲಿ ಗೃಹಸಚಿವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ವಿಶ್ವನಾಥ್, ಪ್ರಕರಣದಲ್ಲಿ ತಮ್ಮ ಎಳ್ಳಷ್ಟೂ ಪಾತ್ರವಿಲ್ಲ. ಯಾವುದೇ ತನಿಖೆಗೂ ತಾವು ಸಿದ್ಧ. ಬೇಕಿದ್ದರೆ ತಮ್ಮನ್ನು ಮಂಪರು  ಪರೀಕ್ಷೆಗೊಳಪಡಿಸಲು ಎಂದು ಹೇಳಿದ್ದಾರೆ.

ರಾಜಕೀಯದ ಉದ್ದೇಶದಿಂದ ಕಡಬಗೆರೆ ಶ್ರೀನಿವಾಸ್ ರನ್ನು ನಾನು ಹತ್ಯೆ ಮಾಡಿಸಿದ್ದೇನೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು. ರಾಜಕೀಯ ಹತ್ಯೆ ಮಾಡಿಸಿ ರಾಜಕಾರಣ ಮಾಡುವ ಸಂಸ್ಕೃತಿ ನನ್ನದಲ್ಲ. ಯಾವುದೇ ತನಿಖೆಗೆ  ನಾನು ಸಿದ್ಧನಿದ್ದೇನೆ. ಪೊಲೀಸರು ಯಾವುದೇ ಕ್ಷಣದಲ್ಲಿ  ಕರೆದರೂ ತನಿಖೆಗೆ ಸಹಕಾರ ನೀಡುವೆ. ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಸುದ್ದಿಗಳಿಂದಾಗಿ ಯಾವ ಕ್ಷಣದಲ್ಲಿ ಏನಾಗುತ್ತದೋ ಎಂಬ ಭಯ ಕಾಡುತ್ತಿದೆ. ನನಗೆ ಹೊರಗೆ  ಓಡಾಡಲು ಭಯವಾಗುತ್ತಿದೆ ಎಂದರು. ಸಮಾಜದಲ್ಲಿ ನನಗೆ ನನ್ನದೇ ಆದ ಗೌರವವಿದೆ. ವಿನಾಕಾರಣ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸುವ ಪ್ರಯತ್ನವಾಗುತ್ತಿದೆ. ಅಂತೆಯೇ ಪ್ರಕರಣ ಸಂಬಂಧ ಇಂದು ಗೃಹ ಸಚಿವರಿಗೆ ಸ್ಪಷ್ಟನೆ  ನೀಡಿದ್ದೇನೆ ಎಂದು ಆರೋಪಿಸಿದ್ದಾರೆ.

ಹಲವರ ವಿರುದ್ಧ ಸರ್ಚ್ ವಾರಂಟ್ ಹೊರಡಿಸಲಾಗಿದ್ದು, ತನಿಖೆ ನಡೆಯುತ್ತಿದೆ: ಪರಮೇಶ್ವರ್
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ ಅವರು, ಕಡಬಗೆರೆ ಶ್ರೀನಿವಾಸ್ ಮೇಲಿನ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರ ಮೇಲೆ ಸರ್ಚ್ ವಾರೆಂಟ್  ಹೊರಡಿಸಲಾಗಿದೆ. ಈಗಾಗಲೇ ತನಿಖೆ ನಡೆಯುತ್ತಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಯಲಹಂಕ ಶಾಸಕ ವಿಶ್ವನಾಥ ಅವರನ್ನು ವಿಚಾರಣೆಗೆ ಒಳಪಡಿಸುವ ವಿಷಯದ ಮಾಹಿತಿ ಇಲ್ಲ  ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT