ಹೆಪ್ಸಿಬಾ ರಾಣಿ ಕೊರ್ಲಾಪಟಿ 
ರಾಜ್ಯ

ಮೈಸೂರು: ನಿಯಮದಂತೆ ಕೆಲಸ ಮಾಡಿದ ಪ್ರಾಮಾಣಿಕ ಮಹಿಳಾ ಐಎಎಸ್ ಅಧಿಕಾರಿಗೆ ವರ್ಗಾವಣೆ ಶಿಕ್ಷೆ

ಶಿಸ್ತು ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಲು ಮುಂದಾದ ಮಹಿಳಾ ಐಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ...

ಮೈಸೂರು: ಶಿಸ್ತು ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಲು ಮುಂದಾದ ಮಹಿಳಾ ಐಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.

ಚಾಮರಾಜನಗರ ಜಿಲ್ಲಾ ಪಂಚಾಯತ್ ಸಿಇಓ ಆಗಿ ಬಂದಿದ್ದ ಹೆಪ್ಸಿಬಾ ರಾಣಿ ಕೊರ್ಲಾಪಟಿ ಅವರನ್ನು 9 ತಿಂಗಳಲ್ಲೇ ಐಟಿ ಮತ್ತು ಬಿಟಿ ಇಲಾಖೆಯ ನಿರ್ದೇಶಕರನ್ನಾಗಿಸಿ ಆದೇಶ ಹೊರಡಿಸಲಾಗಿದೆ.

ನೀತಿ ನಿಯಮಗಳಂತೆ ನಡೆದುಕೊಳ್ಳಬೇಕು ಎಂಬ ಆದರ್ಶದೊಂದಿಗೆ ಕೆಲಸ ಮಾಡುವ ಹೆಪ್ಸಿಬಾ ಅವರು ನರೇಗಾ ಕೆಲಸದ ಬಿಲ್ ಗಳನ್ನು ಕ್ಲಿಯರ್ ಮಾಡಲು ನಿರಾಕರಿಸಿದ್ದರಿಂದ ಅವರನ್ನು ಎತ್ತಂಗಡಿ ಮಾಡಲಾಗಿದೆ. ಯೋಜನೆಯ ನಿಗದಿತ ಮಟ್ಟದಲ್ಲಿ ಕೆಲಸಗಳನ್ನು ಪೂರೈಸಿರಲಿಲ್ಲ, ಜೊತೆಗೆ ಕೂಲಿ ಕೆಲಸಗಾರರ ಬದಲು ಯಂತ್ರಗಳನ್ನು ಉಪಯೋಗಿಸಿ ಕೆಲಸ ಮಾಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಮನೇರಗಾ ಯೋಜನೆಯ ಬಿಲ್ ಗಳನ್ನು ಕ್ಲಿಯರ್ ಮಾಡು ನಿರಾಕರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಜಿಲ್ಲಾ ಪಂಚಾಯತ್ ಸಭೆಗಳಿಗೆ ಮಹಿಳಾ ಸದಸ್ಯರ ಬದಲು ಅವರ ಪತಿಯರು ಹಾಜರಾಗುತ್ತಿದ್ದರು. ಇದಕ್ಕೆ ಸಿಇಓ ವಿರೋಧಿಸಿ ಸದಸ್ಯರೇ ಸಭೆಗೆ ಹಾಜರಾಗಬೇಕೆಂದು ಆದೇಶಿಸಿದ್ದರು, ಇದಕ್ಕೆ ಮಹಿಳಾ ಸದಸ್ಯು ಬಹಿರಂಗವಾಗಿ ಅಸಮಾಧಾನ ವ್ಯಕ್ತ ಪಡಿಸಿದ್ದರು.

ಗುತ್ತಿಗೆದಾರರು ಹಾಗೂ ರಾಜಕಾರಣಿಗಳು ಪ್ರಾಮಾಣಿಕ ಅಧಿಕಾರಿಯ ಕೈಕೆಳಗೆ ಕೆಲಸ ಮಾಡಲು ಒಪ್ಪದೇ, ತಮ್ಮ ಪ್ರಭಾವ ಬಳಸಿ ಐಎಎಸ್ ಅಧಿಕಾರಿಣಿಯನ್ನು ವರ್ಗಾವಣೆ ಮಾಡಿಸಿದ್ದಾರೆ ಎಂದು ಹೇಳಲಾಗಿದೆ.

ತಮ್ಮ ಅಧಿಕಾರ ವ್ಯಾಪ್ತಿ ಮೀರಿದ ಜಿಲ್ಲಾ ಪಂಚಾಯತ್ ಸದಸ್ಯರು ಅಧಿಕಾರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸಿ, ಅಧಿಕಾರ ಕೇಂದ್ರೀಕೃತ  ರಾಜಧಾನಿಗೆ ಎರಡೂ ಮೂರು ಬಾರಿ ಪ್ರವಾಸ ಮಾಡಿ ಅವರನ್ನು ವರ್ಗಾವಣೆ ಮಾಡಿಸಿದ್ದಾರೆ ಎನ್ನಲಾಗಿದೆ. ಜನ ಪ್ರತಿನಿಧಿಗಳನ್ನು ತಮ್ಮ ವಿಶ್ವಾಸಕ್ಕೆ ತೆಗೆದುಕೊಳ್ಳದ್ದು ಹಪ್ಸಿಬಾ ಅವರ ಎತ್ತಂಗಡಿದೆ ಕಾರಣ ಎಂದು ಹೇಳಲಾಗುತ್ತಿದೆ.

ಹಪ್ಸಿಬಾ ಅವರ ವರ್ಗಾವಣೆಯಿಂದ ಚಾಮರಾಜನಗರ ಜಲ್ಲೆಯ ಜನತೆಗೆ ಬೇಸರವಾಗಿದೆ. ಹಿಂದುಳಿದ ವರ್ಗಗ ಜನತೆಯ ಮೆಚ್ಚಿನ ಅಧಿಕಾರಿಯಾಗಿದ್ದರು. ಗ್ರಾಮಗಳಲ್ಲಿ ಶೌಚಾಲಯ ನಿರ್ಮಿಸುವುದು ಹಾಗೂ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಸುಧಾರಣೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು ಎಂದು  ಆಶಾ ಕಾರ್ಯಕರ್ತೆ ಲಕ್ಷ್ಮಿ ಹೇಳುತ್ತಾರೆ, ಇನ್ನು ಎರಡು ತಿಂಗಳಲ್ಲಿ 10 ಸಾವಿರ ಶೌಚಾಲಯ ನಿರ್ಮಿಸಲು ಪಣ ತೊಟ್ಟಿದ್ದರು ಎಂದು ಗ್ರಾಮಸ್ಥು ಹಪ್ಸಿಬಾ ಅವರ ಕಾರ್ಯಗಳ ಬಗ್ಗೆ ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ