ರಾಜ್ಯ

4, 6 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ?

Srinivas Rao BV
ಬೆಳಗಾವಿ: ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ರಾಜ್ಯ ಶಿಕ್ಷಣ ಇಲಾಖೆ 4,6 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ.
4, 6 ನೇ ಸಾಲಿನ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಿದರೂ ಸಹ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಫೇಲ್ ಮಾಡದೇ ಇರುವ ಪ್ರಸ್ತಾವನೆ ಇರುವುದು ಶಿಕ್ಷಣ ಇಲಾಖೆಯ ನಿರ್ಧಾರದ ವಿಶೇಷತೆಯಾಗಿದೆ. ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕಡ್ಡಾಯ ಶಿಕ್ಷಣ ವ್ಯವಸ್ಥೆಯ ಪ್ರಕಾರ ಫೇಲ್ ಮಾಡಬಾರದು ಎಂಬ ನಿಯಮವಿರುವುದರಿಂದ 1-8 ನೇ ತರಗತಿ ವರೆಗಿನ ಕಲಿಕೆಯ ಗುಣಮಟ್ಟ ಕುಸಿಯುತ್ತಿದೆ. ಈ ಅಂಶಗಳು 10 ನೇ ತರಗತಿ ಪರೀಕ್ಷೆಯ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು 4,6 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. 
ಪ್ರಸಕ್ತ ಸಾಲಿನಿಂದಲೇ ಬೋರ್ಡ್ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಮಾ.3 ರಿಂದಲೇ ರಾಜ್ಯಾದ್ಯಂತ ಪ್ರಾರಂಭವಾಗಲಿದೆ. ಪ್ರತಿ ಪ್ರಶ್ನೆ ಪತ್ರಿಕೆ 50 ಅಂಕಗಳಿಗೆ ಇರಲಿದ್ದು, ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 10 ನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸುವಂತೆ ಮಾಡಲು ಹೆಚ್ಚು ಗಮನ ಹರಿಸಲಾಗುತ್ತದೆ. 
SCROLL FOR NEXT