ಬೆಂಗಳೂರು: ಜಯಲಲಿತಾ, ಶಶಿಕಲಾ ನಟರಾಜನ್ ಆಕ್ರಮ ಆಸ್ತಿ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಕರ್ನಾಟಕ ಸರ್ಕಾರ ಮಾಡಿರುವ ವೆಚ್ಚವನ್ನು ತಮಿಳುನಾಡು ಸರ್ಕಾರ ಭರಿಸಬೇಕು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ತಮಿಳುನಾಡು ಸರ್ಕಾರ 5 ಕೋಟಿ ರು ನೀಡಬೇಕು ಎಂದು ಹೇಳಿದೆ. ಅದರ ಹೊರತಾಗಿಯೂ ಸುದೀರ್ಘ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಹಣ ಖರ್ಚು ಮಾಡಿದೆ. ಹೀಗಾಗಿ ಈ ಎಲ್ಲಾ ಖರ್ಚು ವೆಚ್ಚಗಳನ್ನು ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಪತ್ಕ ಬರೆಯುವುದಾಗಿ ತಿಳಿಸಿದ್ದಾರೆ.
ಸುಪ್ರೀಂ ನಿರ್ದೇಶನದ ಮೇರೆಗೆ ಪ್ರಾಸಿಕ್ಯೂಟರ್ ನೇಮಿಸಿ ಈ ಪ್ರಕರಣವನ್ನು ರಾಜ್ಯವೇ ನಿರ್ವಹಿಸಿತ್ತು. ಈ ಪ್ರಕರಣ ಹೈಕೋರ್ಟಿನಲ್ಲಿ ವಜಾ ಆದ ಬಳಿಕ ಮೇಲ್ಮನವಿ ಸಲ್ಲಿಸಲಾಯಿತು. ಇದಕ್ಕೆ ಆಗಿರುವ ವೆಚ್ಚವನ್ನು ತಮಿಳುನಾಡು ಭರಿಸಬೇಕು ಎಂದರು.
ಜಯಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗೆ ಕರ್ನಾಟಕ ಸರಕಾರ ವ್ಯಯ ಮಾಡಿದ ಸುಮಾರು 5 ಕೋಟಿ ರೂ.ಗಳನ್ನು ಪಾವತಿ ಮಾಡುವಂತೆ ಸುಪ್ರೀಂ ಕೋರ್ಟ್ ತಮಿಳುನಾಡು ಸರಕಾರಕ್ಕೆ ಮಂಗಳವಾರ ನಿರ್ದೇಶನ ನೀಡಿತ್ತು,